12:19 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು

ಇತ್ತೀಚಿನ ಸುದ್ದಿ

ಗೃಹ ಸಚಿವ ಅಮಿತ್ ಶಾ ನಾಳೆ ಬೆಳಗಾವಿಗೆ: ಸಂಕಲ್ಪ ಯಾತ್ರೆಗೆ ಚಾಲನೆ

27/01/2023, 11:27

ರಾಹುಲ್ ಅಥಣಿ ಬೆಳಗಾವಿ

info.reporterkarnataka agnail.com

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವುದಕ್ಕಾಗಿ ನಾವು ಇಂದಿನಿಂದ ತಯಾರಿ ಆರಂಭಿಸುವ ನಿಟ್ಟಿನಲ್ಲಿ ವಿವಿಧ ಮೋರ್ಚಾಗಳಿಂದ ವಿಜಯ ಸಂಕಲ್ಪ ಯಾತ್ರೆಯನ್ನು ಮಾಡುತ್ತಿದ್ದೇವೆ.

ಈ ಹಿನ್ನೆಲೆಯಲ್ಲಿ ಜ. 28ರಂದು ಬೆಳಗಾವಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ‌ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಸವದಿ ಹೇಳಿದರು.

ಅವರು ಪಟ್ಟಣದ ವಾರ್ಡ್ ನಂಬರ್ 2 ರಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ಪ್ರತಿಯೋರ್ವ ಸಾರ್ವಜನಿಕರಿಗೆ ತಿಳಿಸಿಕೊಡುವ ನಿಟ್ಟಿನಲ್ಲಿ ನಮ್ಮ ಕಾರ್ಯಕರ್ತರು 100% ಸಂಕಲ್ಪ ಮಾಡಬೇಕಿದೆ. ನಮ್ಮ‌ಸರಕಾರದ ಸಾಧನೆಗಳನ್ನು ತಿಳಿಸಿದಾಗ ಮಾತ್ರ ಜನರ ಆಶೀರ್ವಾದ ಪಡೆಯಲು ಸಾಧ್ಯ ಎಂದು ಹೇಳಿದರು.
ನಂತರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶಾಂಭವಿ ಅಶ್ವಥಪೂರ ಅವರು ಮಾತನಾಡಿ, ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರಕ್ಕೆ ಇರುವ ನಮ್ಮ ಬಿಜೆಪಿ ಪಕ್ಷದ ಸಾಧನೆಗಳು ಪ್ರತಿಯೊಂದು ಮನೆ ಮನೆಗೂ ಮುಟ್ಟಿಸಬೇಕು ಎಂಬ ಹಿನ್ನಲೆಯಲ್ಲಿ ಹಾಗೂ ಭಾರತವನ್ನು ವಿಶ್ವಗುರುವಾಗಿಸುವುದು ನಮ್ಮ ಬಿಜೆಪಿ ಪಕ್ಷಕ್ಕೆ ಮಾತ್ರ ಸಾಧ್ಯ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು