12:26 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಗೃಹಲಕ್ಷ್ಮಿ ಯೋಜನೆ ಅತ್ಯಂತ ಯಶಸ್ವಿ: ಸಿದ್ದು ಸವದಿ ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

22/02/2024, 23:59

ಬೆಂಗಳೂರು(reporterkarnataka.com): ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಸುಮಾರು 1.18 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡುತ್ತಿದ್ದೇವೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬಜೆಟ್ ಮೇಲಿನ ಚರ್ಚೆ ವೇಳೆ ಗುರುವಾರ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಗೃಹಲಕ್ಷ್ಮಿ ಯೋಜನೆ ಅರ್ಹರಿಗೆ ತಲುಪುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯೋಜನೆಗೆ 1.28 ಕೋಟಿ ಮಹಿಳೆಯರು ಅರ್ಹರಿದ್ದು, ಈ ಪೈಕಿ ಯೋಜನೆಗೆ ನೋಂದಣಿಯಾಗಿರುವ 1.18 ಕೋಟಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಾಗುತ್ತಿದೆ. ಬಜೆಟ್‌ನಲ್ಲಿ ವಾರ್ಷಿಕ 34 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎಂದರು.
ಇದೊಂದು ದೊಡ್ಡ ಯೋಜನೆ. ಗೃಹಲಕ್ಷ್ಮಿ ಬಂದ ಬಳಿಕ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಣೆಯಾಗಿದೆ ಎಂದು ಹೇಳಿದರು. ಎಲ್ಲಾ ಫಲಾನುಭವಿಗಳು ಸರ್ಕಾರಕ್ಕೆ ಆಶೀರ್ವಾದ ಮಾಡುತ್ತಿದ್ದಾರೆ. ನೀವಷ್ಟೇ (ವಿರೋಧ ಪಕ್ಷ) ಯೋಜನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದೀರಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದರು.
ಗೃಹಲಕ್ಷ್ಮಿ ಯೋಜನೆ ನಿಮ್ಮ ಕ್ಷೇತ್ರದಲ್ಲಿ ಎಷ್ಟು ಮಂದಿಗೆ ತಲುಪಿದೆ. ಇದರಿಂದ ಆಗಿರುವ ಅನುಕೂಲವೇನು ಎನ್ನುವುದನ್ನು ಅಂಕಿ ಅಂಶ ಸಮೇತ ಬೇಕಿದ್ದರೆ ನೀಡುವೆ. ಅನಾವಶ್ಯಕವಾಗಿ ಯೋಜನೆ ಬಗ್ಗೆ ಟೀಕೆ ಮಾಡಬೇಡಿ ಎಂದು ಹೇಳಿದರು.
ಸರಾಸರಿ ನೂರು ಜನರಲ್ಲಿ 97 ಮಂದಿಗೆ ಯೋಜನೆ ತಲುಪಿದ್ದು, ಉಳಿದ ಮೂರು ಮಂದಿಗೆ ಕೆಲವೊಂದು ಕಾರಣದಿಂದ ತಲುಪಿಲ್ಲ. ಈ ಸಮಸ್ಯೆಗೆ ನಮ್ಮ ಇಲಾಖೆಯ ಅಧಿಕಾರಿಗಳು ಪರಿಹಾರ ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಗೃಹಲಕ್ಷ್ಮಿ ಯೋಜನೆಯ ಹಣ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಇಲ್ಲಿ ಮಧ್ಯವರ್ತಿಗಳ ಕಾಟ ಇರುವುದಿಲ್ಲ. ವಿಧವಾ ವೇತನ ಪಡೆಯಲು ಲಂಚ ನೀಡುವ ಸ್ಥಿತಿ ಇತ್ತು. ಆದರೆ ಗೃಹಲಕ್ಷ್ಮಿ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಹಿರಿಯ ಶಾಸಕರು ಸದನಕ್ಕೆ ತಪ್ಪು ಮಾಹಿತಿ ನೀಡಬಾರದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿನಂತಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು