2:36 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಗೃಹಿಣಿಯ ಅತ್ಯಾಚಾರ ಯತ್ನ ಪ್ರಕರಣ: ಕಾಮುಕ ಆರೋಪಿ ಅಂದರ್; ಹುಲ್ಲಹಳ್ಳಿ ಪೊಲೀಸರ ಮಿಂಚಿನ ಕಾರ್ಯಾಚರಣೆ

20/12/2023, 14:41

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಪತಿಗೆ ಮೊಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಕಾಮುಕನನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಂಜನಗೂಡು ತಾಲೂಕಿನ ಕಂದೇಗಾಲ ಗ್ರಾಮದ ಸಮೀಪವಿರುವ ತೋಟದ ಬಳಿ ಎರಡು ದಿನಗಳ ಹಿಂದೆ ಘಟನೆ ನಡೆದಿತ್ತು .ಪತಿ ಮುಂದೆಯೇ ಪತ್ನಿ ಮೇಲೆ ಎರಗಿ ಅತ್ಯಾಚಾರಕ್ಕೆ ಯತ್ನಿಸಿ ಪರಾರಿಯಾಗಿದ್ದ ಕಾಮುಕ ನವೀನ್ ಕುಮಾರ್ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಮಹಿಳೆ ಮೇಲೆ ಕಾಮುಕ ದೃಷ್ಟಿ ಬೀರಿದ್ದ ನವೀನ್ ಕುಮಾರ್ ಪತಿ ಮನೆ ಒಳಗೆ ತೆರಳಿದ್ದ ವೇಳೆ ಅತ್ಯಾಚಾರಕ್ಕೆ ಯತ್ನಿಸಿದ್ದ.‌ ಪತ್ನಿಯ ಚೀರಾಟ ಕೇಳಿ ಪತಿ ಓಡಿಬಂದು ರಕ್ಷಣೆಗೆ ಧಾವಿಸಿದಾಗ ಮೊಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ.ಆರೋಪಿಯ ಸೆರೆಗಾಗಿ ಹುಲ್ಲಹಳ್ಳಿ ಠಾಣೆ ಪೊಲೀಸರು ಬಲೆ ಬೀಸಿದ್ದರು.ಘಟನೆ ನಡೆದ ಕೇವಲ 48 ಗಂಟೆಗಳಲ್ಲಿ ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು