1:59 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ…

ಇತ್ತೀಚಿನ ಸುದ್ದಿ

ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

04/09/2025, 19:10

ಬೆಂಗಳೂರು(reporterkarnataka.com): ಜಿಎಸ್ ಟಿ ಸರಳೀಕರಣ ಬಡವರ ಪರ, ಸಾಮಾನ್ಯ ಜನರ ಪರ ಗ್ರಾಹಕ ಸ್ನೇಹಿ ತೀರ್ಮಾನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ಈ ಕುರಿತು ಎಕ್ಸ್ .ಮಾಡಿರುವ ಅವರು ಇದರಿಂದ ವ್ಯಾಪಾರ ವಹಿವಾಟು ಹೆಚ್ಚಳವಾಗಲಿದ್ದು ದೇಶದ ಆರ್ಥಿಕತೆಯನ್ನು ಬಲಗೊಳಿಸುತ್ತದೆ. ಇದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೆಗೆದುಕೊಂಡಿರುವ ಅತ್ಯಂತ ದಿಟ್ಟ ನಿರ್ಧಾರವಾಗಿದೆ. ಅವರ ಕನಸಿನ ಆತ್ಮನಿರ್ಭರ ಹಾಗೂ ವಿಕಸಿತ ಭಾರತ ನಿರ್ಮಾಣಕ್ಕೆ ಇದು ಪೂರಕವಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರಗಳು ಬಡವರ ಹಾಗೂ ಸಾಮಾನ್ಯ ಜನರ ಕಲ್ಯಾಣಕ್ಕಾಗಿ ಸಹಕಾರ ನೀಡಬೇಕು.ಅನೇಕ ರಾಜ್ಯಗಳು ಜಿಎಸ್ ಟಿ ಕಡಿತಕ್ಕೆ ಆಗ್ರಹಿಸುತ್ತಿದ್ದವು. ಆದರೆ,ತಮ್ಮ ಪಾಲಿನ ಆದಾಯ ಬಿಟ್ಟು ಕೊಡಲು ಒಪ್ಪುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು