ಇತ್ತೀಚಿನ ಸುದ್ದಿ
ಗುಡ್ಡೆಹೊಸೂರು: ಸಿದ್ದರಾಮಯ್ಯಗೆ ಘೇರಾವ್; ಪೊಲೀಸ್ ಹಾಗೂ ಪ್ರತಿಭಟನಾಕಾರರ ಮಧ್ಯೆ ನೂಕಾಟ ತಳ್ಳಾಟ
18/08/2022, 21:29
ಮಡಿಕೇರಿ(reporterkarnataka.com):
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಗುಡ್ಡೆಹೊಸೂರಿನಲ್ಲಿ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ನೂಕಾಟ ತಳ್ಳಾಟ ನಡೆಯಿತು.
ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದು ಆಕ್ರೋಶ
ವ್ಯಕ್ತಪಡಿಸಿದರು.
ರಸ್ತೆ ಬದಿ ಸಾವರ್ಕರ್ ಭಾವಚಿತ್ರ ಹಿಡಿದು ನಿಂತಿದ್ದ ಪ್ರತಿಭಟನಾಕಾರರು ಸಿದ್ದರಾಮಯ್ಯಗೆ ಧಿಕ್ಕಾರ ಕೂಗಿದರು.ಈ ಸಂದರ್ಭ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ತಳ್ಳಾಟ ನೂಕಾಟ ನಡೆಯಿತು.
ಸಿದ್ದರಾಮಯ್ಯ ಕಾರಿಗೆ ಕಲ್ಲು ಎಸೆಯು ಪ್ರಯತ್ನವನ್ನು ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಹಲವು ಮಂದಿ ಬಿಜೆಪಿಗರನ್ನು ವಶಕ್ಕೆ ಪಡೆದು ಪೊಲೀಸ್ ವಾಹನಕ್ಕೆ ಹತ್ತಿಸಲಾಯಿತು.