8:27 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಗುಜರಾತ್ ವಿಧಾನಸಭೆ ಎಲೆಕ್ಷನ್ ದಿನಾಂಕ ಫಿಕ್ಸ್: ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ಚುನಾವಣೆ

03/11/2022, 14:35

ಅಹ್ಮದಾಬಾದ್ (reporter Karnataka.com): ಗುಜರಾತ್ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾಗಿದ್ದು,ವ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಗುರುವಾರ ಪ್ರಕಟಿಸಿದೆ.
ನವದೆಹಲಿಯ ಆಕಾಶವಾಣಿ ಭವನದಲ್ಲಿ ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರ ಸಮ್ಮುಖದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಗುಜರಾತ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಕುರಿತು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.
ವಿಧಾನಸಭೆಯ 182 ಸ್ಥಾನಗಳ ಪೈಕಿ ಮೊದಲ ಹಂತದಲ್ಲಿ 89 ಮತ್ತು ಎರಡನೇ ಹಂತದಲ್ಲಿ 93 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ವರ್ಷ 4.9 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ 34,000 ಕ್ಕೂ ಹೆಚ್ಚು ಮತಗಟ್ಟೆಗಳು ಸೇರಿದಂತೆ 51,000 ಕ್ಕೂ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು