10:55 AM Sunday25 - January 2026
ಬ್ರೇಕಿಂಗ್ ನ್ಯೂಸ್
ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ…

ಇತ್ತೀಚಿನ ಸುದ್ದಿ

ಗುಜರಾತ್: ಸೇತುವೆ ಕುಸಿತದಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ; 5 ಮಂದಿಯ ರಕ್ಷಣೆ

09/07/2025, 20:15

ಅಹಮದಾಬಾದ್(reporterkarnataka.com): ಗುಜರಾತ್‌ ನ ವಡೋದರಾ ಜಿಲ್ಲೆಯ ಮುಜ್‌ಪುರ ಬಳಿಯ ಸೇತುವೆಯೊಂದು ಬುಧವಾರ ಬೆಳಗ್ಗೆ ಕುಸಿದು ಬಿದ್ದ ಪರಿಣಾಮ ಹಲವಾರು ವಾಹನಗಳು ನದಿಗೆ ಬಿದ್ದು, ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆ.
ಕೇವಲ 40 ವರ್ಷಗಳಷ್ಟು ಹಳೆಯದಾದ ಗಂಭೀರಾ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದೆ. ದುರಂತದಲ್ಲಿ ಐವರನ್ನು ರಕ್ಷಿಸಲಾಗಿದೆ.

ಯಾವುದೇ ಮುನ್ಸೂಚನೆ ಸಿಗದೆ ಸೇತುವೆ ಏಕಾಏಕಿ ಕುಸಿದು ಬಿದ್ದಿದ್ದು, ಎರಡು ಟ್ರಕ್‌ಗಳು, ಒಂದು ಪಿಕಪ್ ವ್ಯಾನ್ ಮತ್ತು ಇನ್ನೊಂದು ವಾಹನ ನದಿಗೆ ಬಿದ್ದಿವೆ. ಕೆಲವೇ ನಿಮಿಷಗಳಲ್ಲಿ, ಗ್ರಾಮಸ್ಥರು ಸುದ್ದಿ ಮುಟ್ಟಿಸಿ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಐವರನ್ನು ರಕ್ಷಿಸುವಲ್ಲಿ ಸಫಲವಾಗಿದೆ.
ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ಭಾಗಗಳನ್ನು ಸಂಪರ್ಕಿಸುವ ನದಿಗೆ ಗಂಭೀರಾ ಸೇತುವೆ ನಿರ್ಮಿಸಲಾಗಿತ್ತು. ಇದರ ಸ್ಲ್ಯಾಬ್ ಕುಸಿದು ಐದಾರು ವಾಹನಗಳು ಮಹಿಸಾಗರ್ ನದಿಗೆ ಬಿದ್ದವು ಎಂದು ಗುಜರಾತ್ ಆರೋಗ್ಯ ಸಚಿವ ರುಷಿಕೇಶ್ ಪಟೇಲ್ ತಿಳಿಸಿದ್ದಾರೆ.
ಸೇತುವೆಯನ್ನು 1985 ರಲ್ಲಿ ನಿರ್ಮಿಸಲಾಗಿತ್ತು. ಅದರ ನಿರ್ವಹಣೆಯನ್ನು ಅಗತ್ಯವಿದ್ದಾಗ ನಿಯತಕಾಲಿಕವಾಗಿ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು