1:40 AM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಅಹಮದಾಬಾದ್: ಹಾಸ್ಟೆಲ್ ಮೇಲೆ ವಿಮಾನ ಪತನ; ಗುಜರಾತ್‌ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಾವು

12/06/2025, 18:22

ನವದೆಹಲಿ(reporterkarnataka.com); ಟೇಕಾಫ್ ಆದ ತಕ್ಷಣ ಪತನಗೊಂಡ ಏರ್ ಇಂಡಿಯಾ ಬೋಯಿಂಗ್ ನಲ್ಲಿ ಪ್ರಯಾಣಿಸುತ್ತಿದ್ದ
ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಾವನ್ನಪ್ಪಿದ್ದಾರೆ ಎಂದು ನಂಬಲಾರ್ಹ ಮೂಲಗಳು ತಿಳಿಸಿವೆ.
ವಿಜಯ್ ರೂಪಾನಿ ಅವರು ಅಹಮದಾಬಾದ್ ನಿಂದ ಲಂಡನ್ ಗೆ ಪ್ರಯಾಣಿಸುತ್ತಿದ್ದರು. ವಿಮಾನ
ಗುರುವಾರ ಮಧ್ಯಾಹ್ನ ಅಹಮದಾಬಾದ್
ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೂಡಲೇ ಏರ್ ಪೋರ್ಟ್ ಬಳಿ ವಿದ್ಯಾರ್ಥಿಗಳ ಹಾಸ್ಟೆಲ್ ಮೇಲೆ ಪತನಗೊಂಡಿತ್ತು. ಕೇವಲ 5 ನಿಮಿಷಗಳ ಕಾಲ ಮಾತ್ರ ಹಾರಾಟ ನಡೆಸಿತ್ತು. ವಿಮಾನ ಪೈಲಟ್ ವಿಮಾನವನ್ನು ಮೇಲಕ್ಕೆತ್ತಲು ಬಹಳಷ್ಟು ಪ್ರಯತ್ನ ಪಟ್ಟರೂ ವಿಮಾನ ಮೇಲೇರದೆ ಪತನಗೊಂಡಿತು.
ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಪ್ರಯಾಣಿಸುತ್ತಿದ್ದರು ಎಂದು ಈ ಮುನ್ನವೇ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದರು.
ವಿಜಯ್ ರೂಪಾನಿ ಅವರು ಏರ್ ಇಂಡಿಯಾ ವಿಮಾನದಲ್ಲಿ ಲಂಡನ್‌ಗೆ ಹೋಗುತ್ತಿದ್ದರು ಎಂದು ರಾಜ್ಯ ಬಿಜೆಪಿಯ ಹಿರಿಯ ನಾಯಕ ಭೂಪೇಂದ್ರಸಿನ್ಹ್ ಚುಡಾಸಮಾ ಹೇಳಿದ್ದರು.
ಗುರುವಾರ ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಇಲ್ಲಿನ ವಸತಿ ಪ್ರದೇಶದಲ್ಲಿ ಹಾಸ್ಟೇಲ್ ಮೇಲೆ ಪತನಗೊಂಡಿದೆ. ಹಾಸ್ಟೇಲ್ ನಲ್ಲಿದ್ದ ವಿದ್ಯಾರ್ಥಿಗಳು ಕೂಡ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು