12:09 PM Tuesday2 - December 2025
ಬ್ರೇಕಿಂಗ್ ನ್ಯೂಸ್
Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ…

ಇತ್ತೀಚಿನ ಸುದ್ದಿ

ಗುಣಮಟ್ಟದ ವಿದ್ಯುತ್ ಸರಬರಾಜು: 9ರಂದು ಗ್ಯಾಸ್ ಇನ್ಸುಲೇಟೆಡ್ ಉಪಕೇಂದ್ರ ಉದ್ಘಾಟನೆ

07/05/2022, 07:30

ಮಂಗಳೂರು(reporterkarnataka.com): ಗುಣಮಟ್ಟದ ವಿದ್ಯುತ್ ಸರಬರಾಜಿಗಾಗಿ ಸಮಗ್ರ ವಿದ್ಯುತ್ ಅಭಿವೃದ್ಧಿ ಯೋಜನೆಯಡಿ ನಗರದ ಉರ್ವಾ ಮಾರ್ಕೆಟ್ ಬಳಿ ನಿರ್ಮಿಸಲಾದ 2*8 ಎಂ.ವಿ.ಎ. 33/11 ಕೆ.ವಿ ಗ್ಯಾಸ್ ಇನ್ಸುಲೇಟೆಡ್ ಉಪಕೇಂದ್ರದ ಉದ್ಘಾಟನಾ ಸಮಾರಂಭವು ಮೇ 9ರಂದು ಬೆಳಿಗ್ಗೆ 11.30ಕ್ಕೆ ಉರ್ವಾ ಮಾರ್ಕೆಟ್ ನಲ್ಲಿರುವ ಜಿ.ಐ.ಎಸ್ ಉಪಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಕೋಟ ಶ್ರೀನಿವಾಸ ಪೂಜಾರಿ ಅವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು.  

ಸಂಸದರಾದ ನಳಿನ್ ಕುಮಾರ್ ಕಟೀಲ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಯು.ಟಿ. ಖಾದರ್, ಡಾ.ವೈ. ಭರತ್ ಶೆಟ್ಟಿ, ಹರೀಶ್ ಪೂಂಜ, ರಾಜೇಶ್ ನಾಯಕ್, ಸಂಜೀವ ಮಠಂದೂರು, ಉಮಾನಾಥ್ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್. ಬೋಜೆಗೌಡ, ಪ್ರತಾಪ ಸಿಂಹ ನಾಯಕ್, ಮಂಜುನಾಥ್ ಭಂಡಾರಿ, ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್, ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ, ಮಹಾಪೌರ ಪ್ರೇಮಾನಂದ ಶೆಟ್ಟಿ, ಮಹಾನಗರ ಪಾಲಿಕೆ ಸದಸ್ಯೆ ಸಂಧ್ಯಾ ಮೋಹನ್ ಆಚಾರ್, ವಿಶೇಷ ಆಹ್ವಾನಿತರಾಗಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್, ಕವಿಪ್ರನಿನಿ ವ್ಯವಸ್ಥಾಪಕ ನಿರ್ದೇಶಕಿ ಡಾ.ಎನ್. ಮಂಜುಳ, ಪೊಲೀಸ್ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು