ಇತ್ತೀಚಿನ ಸುದ್ದಿ
ಗೂನಡ್ಕ ಮಸೀದಿಯ ಕಾಣಿಕೆ ಡಬ್ಬಿ ಕಳವು: ಆರೋಪಿ ಆಂಧ್ರ ನಿವಾಸಿಯ ಬಂಧನ
08/04/2026, 14:21
ಸುಳ್ಯ(reporterkarnataka.com): ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 30ರಂದು ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಠಾಣೆಯಲ್ಲಿ ಅ.ಕ್ರ 45/2026 ಕಲಂ 303(2)BNS -2023 ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಕೆಮ್ರಾಜೆ ಎಲಿಮಲೆ ಎಂಬಲ್ಲಿ ಆರೋಪಿ ಆಂಧ್ರಪ್ರದೇಶದ ಪಶ್ಚಿಮ ಗೊದಾವರಿ ನಿವಾಸಿ ಮಹಮ್ಮದ್ ಸಲ್ಮಾನ್ (35) ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ. ಆರೋಪಿಯಿಂದ ಕಳವು ಮಾಡಿದ 2000 ರೂ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.












