4:04 AM Thursday23 - January 2025
ಬ್ರೇಕಿಂಗ್ ನ್ಯೂಸ್
7-8 ವರ್ಷ ಕಳೆದರೂ ಹಸ್ತಾಂತರವಾಗದ ಶಾಲಾ ಕೊಠಡಿ: ಮಾಹಿತಿ ಇಲ್ಲವೆಂದ ಬಿಇಒ; ಶಿಕ್ಷಣ… ಯುನಿಸೆಕ್ಸ್ ಸೆಲೂನ್ ದಾಳಿಕೋರರ ವಿರುದ್ದ ಕ್ರಮಕ್ಕೆ ಸೂಚನೆ ನೀಡಿದ್ದೇನೆ: ಉಡುಪಿಯಲ್ಲಿ ಗೃಹ ಸಚಿವ… ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕ: ಬೀದರ್ ನಲ್ಲಿ… ವರ್ಷದಲ್ಲಿ 2 ಲಕ್ಷ ಅಕ್ರಮ ಪಂಪ್ ಸೆಟ್ ಗಳು ಸಕ್ರಮ: ಇಂಧನ ಸಚಿವ… ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ: ಜಿಲ್ಲೆಯ ಶಾಸಕರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅಭಿನಂದನೆ ವಿಜಯಪುರ: ಫೇಕ್ ಡಾಕ್ಟರ್ ಇದ್ದಾರೆ ಎಚ್ಚರ; ನಾಲತವಾಡದಲ್ಲೂ ನಕಲಿ ವೈದ್ಯರುಗಳ ಹಾವಳಿ ಸ್ಥಳ ಮಹಜರು: ಕೋಟೆಕಾರು ದರೋಡೆ ಪ್ರಕರಣದ ಆರೋಪಿ ಪರಾರಿಗೆ ಯತ್ನ; ಪೊಲೀಸರ ಗುಂಡೇಟು,… ಕೋಟೆಕಾರು ದರೋಡೆ ಪ್ರಕರಣ: ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; 3 ಮಂದಿ ಆರೋಪಿಗಳ… ಗಾಂಧಿ ಭಾರತ ಮರು ನಿರ್ಮಾಣ ಕನ್ನಡ- ಆಂಗ್ಲ ಪುಸ್ತಕ ಬಿಡುಗಡೆ: ಬೃಹತ್ ಗಾಂಧಿ… ಕಾಂತಾರ: ಚಾಪ್ಟರ್ 1 ಸಿನಿಮಾ ತಂಡ ಷರತ್ತು ಉಲ್ಲಂಘಿಸಿದರೆ ಚಿತ್ರೀಕರಣ ಸ್ಥಗಿತ: ಅರಣ್ಯ…

ಇತ್ತೀಚಿನ ಸುದ್ದಿ

ಗುಣಮಟ್ಟದ ವೈದ್ಯಕೀಯ ಸೇವೆ ಮೂಲಕ ಫಾದರ್ ಮುಲ್ಲರ್ ಸಂಸ್ಥೆಗೆ ಜಾಗತಿಕ ಮಟ್ಟದಲ್ಲಿ ಖ್ಯಾತಿ: ಮಂಗಳೂರು ಬಿಷಪ್ ಪೀಟರ್ ಪೌಲ್ ಸಾಲ್ದಾನಾ

18/10/2023, 12:19

ಮಂಗಳೂರು(reporterkarnataka.com): ಫಾದರ್ ಮುಲ್ಲರ್ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ, ಸೇವಾ ಮನೋಭಾವ ಬೆಳೆಸುವ ಶ್ರೇಷ್ಠ ಸಂಸ್ಥೆಯಾಗಿದೆ ಎಂದು ಪುತ್ತೂರು ಡಿವೈಎಸ್ಪಿ ಡಾ. ಗಾನ ಪಿ. ಕುಮಾರ್ ಹೇಳಿದರು.
ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ಮೂಲಕ ಹಮ್ಮಿಕೊಂಡಿದ್ದ ಫಾದರ್ ಮುಲ್ಲರ್ ಎಂಬಿಬಿಎಸ್ ಪದವಿ ಕಾಲೇಜಿನ ಬೆಳ್ಳಿಹಬ್ಬದ ಸಮಾರಂಭದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೆಳ್ಳಿಹಬ್ಬ ಆಚರಿಸುತ್ತಿರುವ ಫಾದರ್ ಮುಲ್ಲರ್ ಎಂಬಿಬಿಎಸ್ ಸಂಸ್ಥೆ ಸಾಗಿ ಬಂದ ದಾರಿ ಶ್ಲಾಘನೀಯ. ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ವೈದ್ಯಕೀಯ ಪದವಿ ಪಡೆದಿರುವುದು ಅವಿಸ್ಮರಣೀಯ ಅನುಭವ ನೀಡಿದೆ ಎಂದರು.


ಶಿಕ್ಷಣದ ಜತೆಗೆ ವ್ಯಕ್ತಿತ್ವ ಬೆಳವಣಿಗೆ ಅತ್ಯಗತ್ಯ. ರ‍್ಯಾಂಕ್ ಗಳಿಕೆಗೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹಾಕದೇ ವಿದ್ಯಾರ್ಥಿಗಳ ಆತ್ಮವಿಶ್ವಾಸ ಮತ್ತು ಸರ್ವಾಂಗೀಣ ಬೆಳವಣಿಗೆಗೆ ಪೋಷಕರು ಸಹಾಯ ನೀಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ಅಧ್ಯಕ್ಷ ಹಾಗೂ ಮಂಗಳೂರು ಬಿಷಪ್ ಅತೀ ವಂದನೀಯ ಪೀಟರ್ ಪೌಲ್ ಸಾಲ್ದಾನಾ ಮಾತನಾಡಿ, ಫಾದರ್ ಮುಲ್ಲರ್ ಸಂಸ್ಥೆ ತನ್ನ ಗುಣಮಟ್ಟದ ವೈದ್ಯಕೀಯ ಸೇವೆ ಮೂಲಕ ಜಾಗತಿಕ ಮಟ್ಟದ ಖ್ಯಾತಿ ಗಳಿಸಿದೆ ಎಂದರು.
ತುಂಬೆ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಮುಖ್ಯಸ್ಥ ಡಾ.ಆಂಟನಿ ಸಿಲ್ವನ್ ಡಿ ಸೋಜ ಅವರು ಬೆಳ್ಳಿ ಹಬ್ಬದ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮ ಗಳ ಬಗ್ಗೆ ತಿಳಿಸಿದರು.
ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕ ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಸ್ವಾಗತಿಸಿದರು. ಫಾದರ್ ಮುಲ್ಲರ್ ಸೇವಾ ಸಂಸ್ಥೆ ಗಳ ವಿವಿಧ ವಿಭಾಗದ ಮುಖ್ಯಸ್ಥ ಅಜಿತ್ ಮಿನೇಜಸ್, ವಿನ್ಸೆಂಟ್ ಸಿಲ್ವೇಸ್ಟ್ ರ್ ಲೋಬೊ, ಜೀವನ್ ಸಿಕ್ವೇರ, ಡಾ. ಉದಯ ಕುಮಾರ್, ಡಾ. ಪ್ರಭು ಕಿರಣ್, ಡಾ. ಹೀಲ್ಡಾ, ಜೆಸಿಂತಾ, ಡಾ. ಚರಿಷ್ಮಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು