ಇತ್ತೀಚಿನ ಸುದ್ದಿ
ಗುಂಡಿ ಮುಚ್ಚುತ್ತಿದ್ದರೂ ಸಸಿ ಇನ್ನೂ ಬಂದಿಲ್ಲ; ಹಸುರಿನ ಹೆಸರಿನಲ್ಲಿ ಲಕ್ಷಾಂತರ ರೂ. ಅಪವ್ಯಯ
26/06/2021, 17:15
ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗ
info.reporterkarnataka@gmail.com
ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಸ್ಕಿ ಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಸಿಗಳನ್ನು ನಾಟಿ ಮಾಡಲು ಗುಂಡಿಗಳನ್ನು ತೆಗೆದು ಹಲವಾರು ದಿನಗಳು ಕಳೆದರು ಸಸಿಗಳನ್ನು ನಾಟಿ ಮಾಡದೇ ತೆಗೆದು ಗುಂಡಿಗಳು ಮುಚ್ಚಿ ಹೋಗುತ್ತಿವೆ.
ಸರ್ಕಾರದ ಬೊಕ್ಕಸಕ್ಕೆ ಇದರಿಂದ ಹೊಡೆತ ಬೀಳುವಂತಾಗಿದೆ. ಇದಕ್ಕೆ ಹೊಣೆಗಾರರು ಯಾರು ? ಸರ್ಕಾರ ಸಂಕಷ್ಟದ ಸಮಯದಲ್ಲಿ ಹೀಗೆ ಆದರೂ ದೇಶದ ಅಭಿವೃದ್ಧಿಯಲ್ಲಿ ಕುಂಠಿತವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಸಂಬಂಧಪಟ್ಟ ಇಲಾಖೆಯವರು ಆದಷ್ಟು ಬೇಗನೆ ಸಸಿಗಳನ್ನು ನಾಟಿ ಮಾಡಲು ವ್ಯವಸ್ಥೆ ಮಾಡಬೇಕೆಂದು ರೈತ ಪ್ರೇಮಿ ಯಮನೂರ್ ನಾಯಕ್ ಒತ್ತಾಯಿಸಿದ್ದಾರೆ.
ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿಯಡಿ ಮಸ್ಕಿ ಕ್ಷೇತ್ರದ ತಿಡಿಗೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಸಿಗಳನ್ನು ನಾಟಿ ಮಾಡಲು ಗುಂಡಿಗಳನ್ನು ತೆಗೆಯಲಾಗಿತ್ತು. ಆದರೆ ಸಸಿಗಳನ್ನು ತಂದು ನಾಟಿ ಮಾಡಿಲ್ಲ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೊಡೆತ ಬೀಳುವಂತಾಗಿದೆ. ಇದಕ್ಕೆ ಹೊಣೆಗಾರರು ಯಾರು ?