12:27 PM Thursday13 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ಗುಂಡ್ಲುಪೇಟೆ: ನಕಲಿ ರಸಗೊಬ್ಬರ ತಯಾರಿಕಾ ಘಟಕದ ಮೇಲೆ ಅಧಿಕಾರಿಗಳ ದಾಳಿ: ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶ

25/06/2022, 09:21

ಮೈಸೂರು(reporterkarnataka.com): ಗುಂಡ್ಲುಪೇಟೆ ಸಮೀಪ ನಕಲಿ ರಸಗೊಬ್ಬರ ಹಾಗೂ ಔಷಧ  ತಯಾರಿಕಾ ಘಟಕದ ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಪಡಿಸಿಕೊಂಡಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ಗಡಿಯಲ್ಲಿರುವ.ಹಿರೀಕಾಟಿ ಗ್ರಾಮದ ಖಾಸಗಿ ಜಮೀನಿನಲ್ಲಿ ತಯಾರಿಸುತ್ತಿದ್ದ ನಕಲಿ ರಸಗೊಬ್ಬರ ಮತ್ತು ಕೃಷಿ ಔಷಧ ಬಗ್ಗೆ ನಿಖರ ಮಾಹಿತಿ ಪಡೆದ ನಂಜನಗೂಡು ಹಾಗೂ ಮೈಸೂರಿನ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ

ನಡೆದ ವೇಳೆ ಸ್ಥಳದಲ್ಲಿದ್ದ ಸಿಬ್ಬಂದಿಗಳು ಹಾಗೂ ಮಾಲೀಕ ಪರಾರಿಯಾಗಿದ್ದಾರೆ. ನೂರಾರು ಟನ್ ಗಳ ನಕಲಿ ರಸಗೊಬ್ಬರ, ಪೀಠೋಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ರಾಜು ಎಂಬ ರೈತ ನೀಡಿದ ದೂರಿನ ಆಧಾರದ ಮೇಲೆ ಅಧಿಕಾರಿಗಳು ಕಾರ್ಯಾಚರಣೆ ಮಾಡಿ ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಕ್ಕೆ ಪಡೆದಿದ್ದಾರೆ. ಮಣ್ಣಿಗೆ ಗೊಬ್ಬರದ ಬಣ್ಣ ಮಿಶ್ರಣ ಮಾಡಿ ಹೆಸರಾಂತ ಕಂಪನಿಯ ಬ್ಯಾಗ್ ಗಳಲ್ಲಿ ತುಂಬಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಹಲವು ದಿನಗಳಿಂದ ಮಾರುಕಟ್ಟೆಯಲ್ಲಿ ನಕಲಿ ಗೊಬ್ಬರ ಸರಬರಾಜಾಗುತ್ತಿದ್ದು ಅಮಾಯಕ ರೈತರು ವಂಚನೆಗೆ ಒಳಗಾಗುತ್ತಿದ್ದ ದೂರುಗಳು ಕೃಷಿ ಇಲಾಖೆಗೆ ಬಂದಿತ್ತು.ಈ ಹಿನ್ನಲೆ ಕಾರ್ಯೋನ್ಮುಖರಾದ ನಂಜನಗೂಡು ಹಾಗೂ ಮೈಸೂರು ಕೃಷಿ ಇಲಾಖೆ ಅಧಿಕಾರಿಗಳು ಜಂಟಿ

ಕಾರ್ಯಾಚರಣೆ ನಡೆಸಿ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ್ದಾರೆ.ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ. ನಕಲಿ ರಸಗೊಬ್ಬರ ತಯಾರಿಸುತ್ತಿದ್ದ ಖದೀಮರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ. ಮೈಸೂರಿನ ಕೃಷಿ ಇಲಾಖೆಯ ಉಪನಿರ್ದೇಶಕ

ರಾಜು ಹಾಗೂ ನಂಜನಗೂಡು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ದೀಪಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು