ಇತ್ತೀಚಿನ ಸುದ್ದಿ
ಗುಂಡ್ಲುಪೇಟೆ: ರಾಷ್ಟ್ರಗೀತೆ ಹಾಡುತ್ತಿರುವಾಗಲೇ ಹೃದಯಾಘಾತಕ್ಕೀಡಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
09/08/2023, 21:19
ಚಾಮರಾಜನಗರ(reporterkarnataka.com): ರಾಷ್ಟ್ರಗೀತೆ ಹಾಡುತ್ತಿರುವಾಗಲೇ ವಿದ್ಯಾರ್ಥಿನಿಯೊಬ್ಬಳು ತೀವ್ರ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ದಾರುಣ ಘಟನೆಗೆ ಬುಧವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಸಾಕ್ಷಿಯಾಯಿತು.
ಪೆಲಿಸಾ ಎಂಬ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ನಿ ಶಾಲೆಯಲ್ಲಿ ಬೆಳಗ್ಗೆ ರಾಷ್ಟ್ರಗೀತೆ ಹಾಡುತ್ತಿದ್ದಾಗ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದು ಅಸುನೀಗಿದ್ದಾಳೆ. ಗುಂಡ್ಲುಪೇಟೆಯ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಕಳೆದ ಎರಡು ವರ್ಷಗಳಿಂದ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಿದ್ದು, ತೀವ್ರ ಕಳವಳಕ್ಕೆ ಕಾರಣವಾಗಿದೆ. ಅದರಲ್ಲೂ ಸಣ್ಣ ವಯಸ್ಸಿನವರು, ಅಪ್ರಾಪ್ತರು ಹೃದಯಾಘಾತಕ್ಕೀಡಾಗುತ್ತಿರುವುದು ಭಯವನ್ನು ಹೆಚ್ಚಿಸಿದೆ.