7:18 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಗುಂಡ್ಲುಪೇಟೆ: ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತ; 6 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

05/03/2022, 10:47

ಚಾಮರಾಜನಗರ( reporterkarnataka.com); ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಸಮೀಪದ ಬಿಳಿ ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತದ ದುರ್ಘಟನೆ ನಡೆದಿದೆ. ಘಟನೆಯಲ್ಲಿ 6 ಮಂದಿ ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಹಲವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆಸಿಬಿ, ಹಿಟಾಚಿ, ಟಿಪ್ಪರ್ ಲಾರಿಗಳು ಮಣ್ಣಿನಡಿ ಸಿಲುಕಿವೆ. ಮಹೇಂದ್ರಪ್ಪ ಎನ್ನುವವರು ಈ ಸ್ಥಳದ ಮಾಲೀಕರಾಗಿದ್ದು, ಕೇರಳ ಮೂಲದ ಹಕೀಂ ಎಂಬುವವರು ಬಿಳಿ ಕಲ್ಲು ಕ್ವಾರಿ ನಡೆಸುತ್ತಿದ್ದರು ಎನ್ನಲಾಗಿದೆ.

ನಾಪತ್ತೆಯಾಗಿರುವ ಕಾರ್ಮಿಕರು ಕೊಳ್ಳೆಗಾಲ ಅಥವಾ ತಮಿಳುನಾಡು ಮೂಲದವರು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದ್ದು, ರಕ್ಷಣಾ ಕಾರ್ಯಚರಣೆ ನಡೆಸುತ್ತಿದೆ.

ಕಲ್ಲು ಗಣಿಗಾರಿಕೆಯಲ್ಲಿ 50 ಕ್ಕು ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಅಪಾಯಕಾರಿ ರೀತಿಯಲ್ಲಿಯೇ ಜೆಸಿಬಿ, ಇಟಾಚಿಗಳು ಕಲ್ಲು ಗಣಿಕಾರಿಕೆ ನಡೆಸುತ್ತಿದ್ದವು. ಅಧಿಕಾರಿಗಳ ನಿರ್ಲಕ್ಷ್ಯವೇ ಅಕ್ರಮ ಗಣಿಗಾರಿಕೆ ನಡೆಸಲು ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

200ಕ್ಕೂ ಹೆಚ್ಚು ಅಡಿ ಆಳದಲ್ಲಿ ಕಲ್ಲುಗಣಿಗಾರಿಕೆ ನಡೆಯುತ್ತಿತ್ತು ಎನ್ನಲಾಗಿದ್ದು, ಮತ್ತಷ್ಟು ಮಾಹಿತಿ ಹೊರಬೀಳಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು