ಇತ್ತೀಚಿನ ಸುದ್ದಿ
ಗುಂಡ್ಯ ಹೊಳೆಗೆ ಬಿದ್ದ ಪ್ರಯಾಣಿಕರಿಲ್ಲದ ಖಾಸಗಿ ಸ್ಲೀಪರ್ ಕೋಚ್ ಬಸ್: ಚಾಲಕ ಸ್ಥಳದಲ್ಲೇ ಸಾವು
12/10/2024, 22:26

ಗುಂಡ್ಯ(reporterkarnataka.com): ಸ್ಲೀಪರ್ ಕೋಚ್ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ಗುಂಡ್ಯ ಹೊಳೆಗೆ ಬಿದ್ದ ಘಟನೆ ಲಾವತ್ತಡ್ಕ ಎಂಬಲ್ಲಿ ನಡೆದಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡ್ಯ ಸಮೀಪ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ನಡುರಾತ್ರಿ 12 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಬಸ್ ನದಿಗೆ ಬಿದ್ದ ಹಿನ್ನೆಲೆಯಲ್ಲಿ ಚಾಲಕ ಭರತ್ (28)ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಸ್ ಗುರುವಾರ ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ನಿನ್ನೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿತ್ತು. ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್-ಅಪ್ ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಗೋಕರ್ಣದಿಂದ ಚಾಲಕ ಮತ್ತು ಸಹ-ಚಾಲಕ ಮಾತ್ರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದು, ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಹೆಚ್ಚಿನ ಸಾವು – ನೋವು ಸಂಭವಿಸಿಲ್ಲ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.