7:46 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಗುಂಡ್ಯ ಹೊಳೆಗೆ ಬಿದ್ದ ಪ್ರಯಾಣಿಕರಿಲ್ಲದ ಖಾಸಗಿ ಸ್ಲೀಪರ್ ಕೋಚ್ ಬಸ್: ಚಾಲಕ ಸ್ಥಳದಲ್ಲೇ ಸಾವು

12/10/2024, 22:26

ಗುಂಡ್ಯ(reporterkarnataka.com): ಸ್ಲೀಪರ್ ಕೋಚ್ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ಗುಂಡ್ಯ ಹೊಳೆಗೆ ಬಿದ್ದ ಘಟನೆ ಲಾವತ್ತಡ್ಕ ಎಂಬಲ್ಲಿ ನಡೆದಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡ್ಯ ಸಮೀಪ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ನಡುರಾತ್ರಿ 12 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಬಸ್​​ ನದಿಗೆ ಬಿದ್ದ ಹಿನ್ನೆಲೆಯಲ್ಲಿ ಚಾಲಕ ಭರತ್ (28)ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಸ್ ಗುರುವಾರ ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ನಿನ್ನೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿತ್ತು. ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್-ಅಪ್ ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಗೋಕರ್ಣದಿಂದ ಚಾಲಕ ಮತ್ತು ಸಹ-ಚಾಲಕ ಮಾತ್ರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದು, ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಹೆಚ್ಚಿನ ಸಾವು – ನೋವು ಸಂಭವಿಸಿಲ್ಲ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು