8:57 PM Tuesday6 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಗುಪ್ತಚರ ಇಲಾಖೆ ಸಿಬ್ಬಂದಿ ಹೃದಯಾಘಾತಕ್ಕೆ ಬಲಿ: ಕರ್ತವ್ಯದಲ್ಲಿದ್ದಾಗಲೇ ಕಾಣಿಸಿಕೊಂಡ ಎದೆನೋವು

16/09/2023, 21:14

ಮಂಗಳೂರು(reporterkarnataka.com): ಕರ್ತವ್ಯದಲ್ಲಿದ್ದ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಶನಿವಾರ ನಡೆದಿದೆ.
ನಗರದ ಉರ್ವ ಮಾರಿಗುಡಿ ನಿವಾಸಿಯಾದ ರಾಜೇಶ್ ಬಿ.ಯು. (53) ಅವರಿಗೆ ಶನಿವಾರ ಮಧ್ಯಾಹ್ನ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಮ ಪಡೆಯುತ್ತಿದ್ದಂತೆ ಅವರು ಕುಸಿದು ಬಿದ್ದಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಕೊನೆಯುಸಿರೆಳೆದರು.
ರಾಜೇಶ್ ಅವರು 1993ನೇ ಬ್ಯಾಚ್ ಗೆ ಸೇರಿದವರು. ನಿವೃತ್ತಿಗೆ ಇನ್ನೂ 7 ವರ್ಷಗಳ ಕಾಲ ಇತ್ತು.
ಅವರು ಸುರತ್ಕಲ್ ಹಾಗೂ ಪಣಂಬೂರು ಪೊಲೀಸ್ ಠಾಣೆಯಲ್ಲೂ ಕರ್ತವ್ಯ ನಿರ್ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು