4:07 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಗುರುಪುರ ಕೈಕಂಬ: ಇಂದಿನಿಂದ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ; ಸಮಾರೋಪಕ್ಕೆ ಮಾಜಿ ಸಚಿವೆ ಶೈಲಜಾ ಟೀಚರ್

22/11/2021, 09:33

ಮಂಗಳೂರು(reporterkarnataka.com): ಸಿಪಿಎಂ ಪಕ್ಷದ ಎರಡು ದಿನಗಳ 23ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ ನವಂಬರ್ 22, 23 ರಂದು ಗುರುಪುರ ಕೈಕಂಬದ ಪ್ರಿಮೀಯರ್ ಸಭಾಂಗಣದ ವೇದಿಕೆಯಲ್ಲಿ ನಡೆಯಲಿದೆ.

ಪ್ರಸಕ್ತ ರಾಜಕೀಯ, ಸಾಮಾಜಿಕ ವಿದ್ಯಮಾನ, ದಕ್ಷಿಣ ಕನ್ನಡ ಜಿಲ್ಲೆಯ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಮ್ಮೇಳನ ಚರ್ಚಿಸಲಿದೆ. ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರಗಳು ಹೆಚ್ಚು ಹೆಚ್ಚು ವ್ಯಾಪಾರೀಕರಣ ಗೊಳ್ಳುತ್ತಿರುವುರಿಂದ ಉಂಟಾಗಿರುವ ಬಿಕ್ಕಟ್ಟು, ಆಳಗೊಳ್ಳುತ್ತಿರುವ ರೈತ, ಕಾರ್ಮಿಕರ ಬವಣೆಗಳು, ತೀವ್ರಗೊಳ್ಳುತ್ತಿರುವ ನಿರುದ್ಯೋಗದ ಸಮಸ್ಯೆಗಳ ಪರಿಹಾರಕ್ಕಾಗಿ ಮುಂದೆ ನಡೆಸಬೇಕಾಗಿರುವ ಹೋರಾಟಗಳ ರೂಪುರೇಷೆಗಳ ಕುರಿತಾದ ನಿರ್ಣಯಗಳು ಸಮ್ಮೇಳನದಲ್ಲಿ ಚರ್ಚೆಗೊಳಗಾಗಲಿವೆ. ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಯ್ಕೆಯಾದ 180 ಸಂಗಾತಿಗಳು ಪ್ರತಿನಿಧಿಗಳಾಗಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. 

ನವಂಬರ್ 22 ರ ಬೆಳಿಗ್ಗೆ 10. 30ಕ್ಕೆ ಸಿಪಿಎಂ ರಾಜ್ಯ ಕಾರ್ಯದರ್ಶಿ ಯು. ಬಸವರಾಜು ಸಮ್ಮೇಳನ

ಉದ್ಘಾಟಿಸಲಿದ್ದಾರೆ‌. ಹಿರಿಯ ಕಾರ್ಮಿಕ ನಾಯಕ ಯು. ಬಿ. ಲೋಕಯ್ಯ ಧ್ವಜಾರೋಹಣದ ಮೂಲಕ ಸಮ್ಮೇಳನದ ಪ್ರಕ್ರಿಯೆಗಳಿಗೆ ಚಾಲನೆ ನೀಡಲಿದ್ದಾರೆ. ನವಂಬರ್ 23 ರ ಸಂಜೆ 3. 00 ಗಂಟೆಗೆ ಪೊಳಲಿ ದ್ವಾರದ ಬಳಿಯಿಂದ ಸಾವಿರಾರು ಕಾರ್ಯಕರ್ತರ ಬೃಹತ್ ಮೆರವಣಿಗೆ ನಡೆಯಲಿದ್ದು, 4 .00 ಗಂಟೆಗೆ ಕೈಕಂಬದ ಪ್ರಿಮೀಯರ್  ಮೈದಾನದಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ. 

ಸಿಪಿಎಂ ಕೇಂದ್ರ ಸಮಿತಿ ಸದಸ್ಯರಾಗಿರುವ ಕೇರಳದ ಮಾಜಿ ಆರೋಗ್ಯ ಸಚಿವೆ ಕೆ. ಕೆ .ಶೈಲಜಾ ಟೀಚರ್ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ಸ್ವಾಗತ ಸಮಿತಿಯ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು