9:48 PM Sunday11 - May 2025
ಬ್ರೇಕಿಂಗ್ ನ್ಯೂಸ್
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ…

ಇತ್ತೀಚಿನ ಸುದ್ದಿ

ಗುರುಪುರ ಮಠದ ಬಳಿಯ ಎಸ್‌ಸಿ-ಎಸ್‌ಟಿ ಕಾಲೊನಿಯಲ್ಲಿ `ಸಭಾಭವನ’ ನಿರ್ಮಾಣ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ

20/09/2023, 20:58

ಗುರುಪುರ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್ ಮತ್ತು ಗುರುಪುರ ಗ್ರಾಮ ಪಂಚಾಯತ್ 2017-18ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಅನುದಾನದಡಿ ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಮಠದ ಬಳಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಂಟಿ ಕಾಲೊನಿಯಲ್ಲಿ ನೂತನ `ಸಭಾಭವನ’ ನಿರ್ಮಾಣಕ್ಕೆ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಅವರು ಗುದ್ದಲಿಪೂಜೆ ನೆರವೇರಿಸಿದರು.
ಮಾಧ್ಯಮದೊಂದಿಗೆ ಶಾಸಕರು ಮಾತನಾಡಿ, ಇದು 12 ಲಕ್ಷ ರೂ ಅನುದಾನದ ಕಾಮಗಾರಿಯಾಗಿದ್ದು, ಸಭಾಭವನ ರಚನೆಗೆ ಅಗತ್ಯವಿರುವ ಉಳಿಕೆ ಅನುದಾನ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಕಾಲೊನಿ ಮಂದಿಗೆ ಭರವಸೆ ನೀಡಿದರು.


ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಪಂಚಾಯತ್ ಅಧಿಕಾರಿಗಳು, ಸ್ಥಳೀಯ ಭಾಗದ ಪಕ್ಷದ ಪ್ರಮುಖರು, ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು