7:07 PM Thursday16 - January 2025
ಬ್ರೇಕಿಂಗ್ ನ್ಯೂಸ್
ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ…

ಇತ್ತೀಚಿನ ಸುದ್ದಿ

ಗುತ್ತಿಗೆದಾರ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ: ಬಿಜೆಪಿ ನಾಯಕರು ಗೈರು; ಕಾಂಗ್ರೆಸ್ ನ ಲಕ್ಷ್ಮಿ ಹೆಬ್ಬಾಳ್ಕರ್ ಹಾಜರು

14/04/2022, 12:32

ಬೆಳಗಾವಿ(reporterkarnataka.com): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್‌. ಈಶ್ವರಪ್ಪ ಅವರ ವಿರುದ್ಧ‌ 40% ಕಮಿಷನ್ ಆರೋಪ‌ ಮಾಡಿ ಪ್ರಧಾನಿಗೆ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರ ಅಂತ್ಯಕ್ರಿಯೆ ಬೆಳಗಾವಿ ಜಿಲ್ಲೆಯ ಬಡಸ ಗ್ರಾಮದಲ್ಲಿ ನೆರವೇರಿತು.

ಸಂತೋಷ್ ಪಾಟೀಲ್ ಅವರ ಪಾರ್ಥಿವ ಶರೀರವನ್ನು ಅವರ ಬಡಸ ಗ್ರಾಮದ ತೋಟದ ಮನೆಯ ಎದುರು ಇರಿಸಿ ಅಂತಿಮ ಪೂಜೆ ಸಲ್ಲಿಸಲಾಯಿತು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಉಡುಪಿಯ ಖಾಸಗಿ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಮೃತದೇಹವನ್ನು ಬುಧವಾರ ರಾತ್ರಿಯೇ ಪೊಲೀಸ್ ಬಂದೋಬಸ್ತ್‌ನಲ್ಲಿ ಅವರ ಹುಟ್ಟೂರಿಗೆ ಸಾಗಿಸಲಾಗಿತ್ತು.

ಅಂತ್ಯ ಸಂಸ್ಕಾರದ ವೇಳೆ ಯಾವುದೇ ಬಿಜೆಪಿ ನಾಯಕರು ಉಪಸ್ಥಿತರಿರಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅಂತ್ಯ ಸಂಸ್ಕಾರ ನಡೆಯುವ ಸ್ಥಳಕ್ಕೆ ಆಗಮಿಸಬೇಕೆಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸ್ಥಳೀಯರು ಆಗ್ರಹಿಸಿದರು. ಆದರೆ ಸಚಿವರು ಆಗಮಿಸಲಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು