7:22 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕುರಿತು ನಿಷ್ಪಕ್ಷಪಾತ ತನಿಖೆ: ಮಂಗಳೂರಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ

12/04/2022, 18:17

ಮಂಗಳೂರು(reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಕುರಿತು ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಲಿದ್ದು, ತನಿಖೆಯ ಪ್ರಾಥಮಿಕ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಮಂಗಳವಾರ ಮಾಧ್ಯಮದ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದ ಆಡಳಿತದ ಕಾಲದಲ್ಲಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಾಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅಥವಾ ಬೇರೆ ಸಚಿವರು ರಾಜೀನಾಮೆ ನೀಡಿದ್ದಾರೆಯೇ? ಎಂದು ಪ್ರಶ್ನಿಸಿದರು.

ಪ್ರತಿ ಜೀವಕ್ಕೂ ಮೌಲ್ಯ ಇದೆ. ವ್ಯಕ್ತಿಗೆ ಅವರದ್ದೇ ಜೀವನ ಇದೆ. ಅದನ್ನು ಗೌರವಿಸಬೇಕು. ನಾವು ತನಿಖೆಯಲ್ಲಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡುತ್ತಿದ್ದೇವೆ. ಪ್ರಾಥಮಿಕ ಮಾಹಿತಿ ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ನೀಡಿದರು.

ಮುಂದಿನ ಚುನಾವಣೆಯನ್ನು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಆಧಾರದಲ್ಲಿಯೇ ಎದುರಿಸಲಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಬೊಮ್ಮಾಯಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು