5:19 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಮಾಜಿ ಸಚಿವ ಈಶ್ವರಪ್ಪಗೆ ಮತ್ತೆ ಸಂಕಷ್ಟ

07/01/2023, 09:41

ಬೆಂಗಳೂರು(reporterkarnataka.com) : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಲ್ಲಿಸಿರುವ ‘ಬಿ’ ರಿಪೋರ್ಟ್‍ನ ಸಂಪೂರ್ಣ ಸಾಕ್ಷ್ಯಗಳನ್ನು ನ್ಯಾಯಾಲಯದ ಸುಪರ್ದಿಗೆ ನೀಡುವಂತೆ 42ನೇ ವಿಶೇಷ ಕೋರ್ಟ್ ಆದೇಶಿಸಿದೆ. ಇದರೊಂದಿಗೆ ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಸಂತೋಷ್ ಮೃತದೇಹ ಸಿಕ್ಕ ಹೋಟೆಲ್ ಸಿಸಿಟಿವಿ ನೀಡಬೇಕು, ಮಾತ್ರವಲ್ಲದೆ ಪೊಲೀಸರು ಮಾಡಿದ ವಿಡಿಯೋವನ್ನು ಜ.31ರಂದು ತನಿಖಾಧಿಕಾರಿಯೇ ಖುದ್ದು ಕೋರ್ಟ್ ಮುಂದೆ ಹಾಜರಾಗಿ ನೀಡಬೇಕು ಎಂದು ಕೋರ್ಟ್ ಆದೇಶಿಸಿದೆ.

ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿದ್ದ ಸಂತೋಷ್ ಪಾಟೀಲ್ ಸಹೋದರ, ಅಸಲಿ ಸಾಕ್ಷ್ಯಗಳನ್ನು ಮರೆಮಾಚಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದರು. ಪೊಲೀಸರೇ ಉಲ್ಲೇಖಿಸಿರುವ ಸಾಕ್ಷ್ಯಗಳನ್ನು ಕೋರ್ಟ್‍ಗೆ ಹಾಜರುಪಡಿಸಿಲ್ಲ. ಹೀಗಾಗಿ, ಪೊಲೀಸರ ಬಳಿ ಇರುವ ಸಾಕ್ಷಿ ಹಾಜರುಪಡಿಸಿದರೆ ಸತ್ಯ ಬಯಲಿಗೆ ಬರುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು