3:33 PM Saturday4 - January 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಗುರುತಿಸಲು ಸೂಚನೆ ಎನ್. ಆರ್. ಪುರ: ರಾಜ್ಯ ಹೆದ್ದಾರಿಯಲ್ಲಿ ಓಡಾಡಿದ ಕಾಡಾನೆ; ನಾಗರಿಕರಲ್ಲಿ ಹೆಚ್ಚಿದ ಆತಂಕ ದೀರ್ಘಾವಧಿ ಸಾಲ 137.85 ಕೋಟಿಗಳ ಅನುದಾನ ವಿನಿಯೋಗ: ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ… ರಾಜ್ಯದ 4 ಸಾರಿಗೆ ನಿಗಮಗಳಲ್ಲಿ ಶೇ.15ರಷ್ಟು ದರ ಹೆಚ್ಚಳ: ಸಚಿವ ಸಂಪುಟ ಅನುಮೋದನೆ ಮಂಗಳೂರು ಸಹಿತ ರಾಜ್ಯದ 6 ಸ್ಮಾರ್ಟ್‌ ಸಿಟಿ ಕಾಮಗಾರಿಗಳ ತನಿಖೆ: ಸಚಿವ ಬೈರತಿ… ಕ್ರೆಡಲ್ ನಿಂದ 40.53 ಕೋಟಿ ಲಾಭಾಂಶ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಹಸ್ತಾಂತರ ಬೆಂಗಳೂರು: ಬೈಕ್ ಶೋ ರೂಂನಲ್ಲಿ ಅಗ್ನಿ ಅನಾಹುತ: ಸುಟ್ಟು ಕರಕಲಾದ 60ಕ್ಕೂ ಹೆಚ್ಚು… ಮುಂದಿನ ವರ್ಷ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆ… ಎಚ್.ಡಿ.ಕೋಟೆ ತಾಲೂಕು ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ

01/01/2025, 22:51

*ಇದು ರಾಜಕೀಯ ಪ್ರೇರಿತ ಆರೋಪ : ಮುಖ್ಯಮಂತ್ರಿ ಸಿದ್ದರಾಮಯ್*

ಬೆಂಗಳೂರು(reporterkarnataka.com): ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯಮಂತ್ತಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜೀನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ, ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜೀನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ. ಆದರೆ ಇಂತಹದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು. ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿ ಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ತಿಳಿಸಿದರು.
*ಬಿಜೆಪಿ ಯಾವುದೇ ಪ್ರಕರಣವನ್ನು ಸಿಬಿಐ ಗೆ ವಹಿಸಿಲ್ಲ:* ಬಿಜೆಪಿಯವರು ತನಿಖೆಯನ್ನು ಸಿಬಿಐ ಗೆ ವಹಿಸಬೇಕೆಂದು ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಪೊಲೀಸರ ಬಗ್ಗೆ ಬಿಜೆಪಿಯವರಿಗೆ ನಂಬಿಕೆಯಿಲ್ಲವೇ? ಬಿಜೆಪಿಯವರು ಅಧಿಕಾರದಲ್ಲಿದ್ದಾಗ, ಒಂದು ಪ್ರಕರಣವನ್ನೂ ಸಿಬಿಐಗೆ ವಹಿಸಿರಲಿಲ್ಲ. ಆದ್ದರಿಂದ ಸಿಬಿಐಗೆ ತನಿಖೆ ವಹಿಸಬೇಕೆಂಬ ಬೇಡಿಕೆ ಮುಂದಿರಿಸಲು ಬಿಜೆಪಿಯವರಿಗೆ ನೈತಿಕತೆ ಇಲ್ಲ ಎಂದು ತಿಳಿಸಿದರು.
*ಸಿ.ಟಿ.ರವಿ ಪ್ರಕರಣ ಸಿಐಡಿ ತನಿಖೆ:* ಎಂಎಲ್ ಸಿ ಸಿ.ಟಿ. ರವಿಯವರು ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಿ.ಟಿ.ರವಿಯವರ ಪ್ರಕರಣವನ್ನೂ ಸಿಐಡಿಗೆ ವಹಿಸಲಾಗಿದೆ. ಅವಾಚ್ಯ ಪದಬಳಕೆ ಆಗಿರುವ ಬಗ್ಗೆ ಎಫ್ ಎಸ್ ಎಲ್ ವರದಿ ಬರಲಿದೆ. ಮಹಿಳಾ ಸಚಿವರಿಗೆ ಅವಹೇಳನ ಮಾಡಿರುವ ಆರೋಪವಿದ್ದು, ಸಿ.ಟಿ.ರವಿಯವರ ಮೇಲೆ ದೂರು ದಾಖಲಾಗಿದೆ ಎಂದರು.
ಹೊಸ ವರ್ಷದ ಸಂದರ್ಭದಲ್ಲಿ ವಿರೋಧ ಪಕ್ಷದವರಿಗೆ ಭಗವಂತ ಸದ್ಭುದ್ಧಿಯನ್ನು ನೀಡಲೆಂದು ಪ್ರಾರ್ಥಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು , ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು