8:48 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಗ್ಯಾರಂಟಿ ಯೋಜನೆ 6 ತಿಂಗಳೊಳಗೆ ಅನುಷ್ಠಾನ ಸಾಧ್ಯವಾಗದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಯು.ಟಿ. ಖಾದರ್

08/05/2023, 16:15

ಮಂಗಳೂರು(reporterkarnataka.com): ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು 6 ತಿಂಗಳೊಳಗೆ ಜಾರಿ ತರಲು ವಿಫಲವಾದರೆ ತಾನು ತನ್ನ ಶಾಸಕತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಹೇಳಿದರು.
ಸೋಮವಾರ ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರದ ಮೊದಲ ಸಂಪುಟ ಸಭೆಯಲ್ಲೇ ಗ್ಯಾರಂಟಿ ಯೋಜನೆಗಳ ಅನುಷ್ಠಾನ ತರಲಾಗುವುದು. ಎಲ್ಲಾದರೂ 6 ತಿಂಗಳು ಕಳೆದರೂ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ತರಲು ಸಾದ್ಯವಾಗದಿದ್ದರೆ ತಾನು ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದರು.
ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಮೇಲೆತ್ತಲು ನಿರುದ್ಯೋಗಿ ಪದವೀಧರರಿಗೆ ನೌಕರಿ ಸಿಗುವ ತನಕ ತಿಂಗಳಿಗೆ 3 ಸಾವಿರ ರೂ. ನೀಡಲಾಗುವುದು. ಇದರಿಂದ ಮಾರುಕಟ್ಟೆಯಲ್ಲಿ ಆರ್ಥಿಕ ಪುನಶ್ಚೇತನ ಸಾಧ್ಯವಾಗುತ್ತದೆ ಎಂದು ಅವರು ನುಡಿದರು.
ಇದು ಸತ್ಯ ಮತ್ತು ಅಸತ್ಯದ ನಡುವಿನ ಚುನಾವಣೆ. ಪ್ರಚಾರ ಮತ್ತು ಅಪಪ್ರಚಾರದ ನಡುವಿನ ಚುನಾವಣೆ. ಬಿಜೆಪಿಗೆ ಸುಳ್ಳೇ ಬಂಡವಾಳ. ಸತ್ಯ ಏನೂ ಇಲ್ಲ. ಭ್ರಷ್ಟಾಚಾರ, ಅವ್ಯವಹಾರ, ಹಗರಣ ಮತ್ತು ಆಡಳಿತ ವೈಫಲ್ಯದಿಂದ ಜನರ ಗಮನವನ್ನು ಬೇರೆ ಕಡೆಗೆ ಸೆಳೆಯಲು ಧರ್ಮ, ಜಾತಿಯ ವಿಷಯ ಎತ್ತುತ್ತಿದೆ. ಆದರೆ ಜನಸಾಮಾನ್ಯರು ತಮಗಾದ ನೋವನ್ನು ಓಟಿನ ಮೂಲಕ ತೋರಿಸಲಿದ್ದಾರೆ. ಬಿಜೆಪಿ ಸೋಲುವುದು ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಗ್ಯಾರಂಟಿ ಎಂದು ಖಾದರ್ ಹೇಳಿದರು.
ಕಾಂಗ್ರೆಸ್ ಸಮಾಜದಲ್ಲಿ ಶಾಂತಿ- ಸೌಹಾರ್ದತೆಯ ಮೂಲಕ ಅಭಿವೃದ್ಧಿ ತರಲು ಬಯಸುತ್ತದೆ. ಬಿಜೆಪಿ ಜನರಿಗೆ ಹೇಗೆ ಮೋಸ ಮಾಡುವುದು ಎನ್ನುವುದರ ಕುರಿತು ಯೋಚಿಸುತ್ತಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಸುರೇಶ್ ಬಳ್ಳಾಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು