1:11 AM Saturday28 - December 2024
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ, ಆರ್ಥಿಕ ಸುಧಾರಣೆಯ ಹರಿಕಾರ ಡಾ. ಮನಮೋಹನ್ ಸಿಂಗ್ ನಿಧನ 16 ದಿನಗಳ ಬೆಂಗಳೂರು ಹಬ್ಬಕ್ಕೆ ಅದ್ಧೂರಿ ತೆರೆ: 500ಕ್ಕೂ ಅಧಿಕ ಕಾರ್ಯಕ್ರಮ; 2… 28ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ‘ಮಂಗಳೂರು ಕಂಬಳ’: 6 ವಿಭಾಗಗಳಲ್ಲಿ ಸ್ಪರ್ಧೆ ಕೂಡ್ಲಿಗಿ ತಲುಪಿದ ಸನ್ನತಿ ಪಂಚಶೀಲ ಬೌದ್ಧ ಪಾದಯಾತ್ರಿಕರು: ಸನ್ನತಿಯಿಂದ ಬೆಂಗಳೂರಿಗೆ 27ನೇ ಬ್ರಹ್ಮೋತ್ಸವ: ನಂಜನಗೂಡು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ವತಿಯಿಂದ ಬೃಹತ್ ಪಾದಯಾತ್ರೆ ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇಗುಲದಲ್ಲಿ ಈ ಬಾರಿ ಬಿಕಾಂ ಜಾತ್ರೆ!: ಹಾಗಂದ್ರೆ ಏನು… ಸಿ.ಟಿ.ರವಿ ಅವರದ್ದು ಕೊಳಕು ಮನಸ್ಸಿನ ವ್ಯಕ್ತಿತ್ವ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿ.ಟಿ‌. ರವಿ ಪತ್ರ ಬರೆದಿದ್ದಾರೆ, ಹೆಬ್ಬಾಳ್ಕರ್ ಅವರಿಂದ ಯಾವುದೇ ಪತ್ರ ಬಂದಿಲ್ಲ: ಸಭಾಪತಿ… ಶಸ್ತ್ರ ಚಿಕಿತ್ಸೆಗೊಳಗಾಗಿರುವ ಕನ್ನಡದ ಪ್ರಸಿದ್ಧ ನಟ ಡಾ. ಶಿವರಾಜ್‌ ಕುಮಾರ್ ಚೇತರಿಕೆ; ಆರೋಗ್ಯ… ಸಿ.ಟಿ. ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ; ನ್ಯಾಯಾಂಗ ತನಿಖೆಗೆ ಪ್ರತಿಪಕ್ಷ ನಾಯಕ…

ಇತ್ತೀಚಿನ ಸುದ್ದಿ

ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

13/12/2024, 08:21

ಬೆಳಗಾವಿ(reporterkarnataka.com): ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 2,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಗುರುವಾರ ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ. ಎ. ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಸದ್ರಿ ಯೋಜನೆಗಳಿಗೆ ಆಯವ್ಯಯ ದಲ್ಲಿ 52,009 ಕೋಟಿ ರೂ ಗಳನ್ನು ಒದಗಿಸಿದೆ.
ರಾಜ್ಯ ಸರ್ಕಾರವು 2023-24 ರಲ್ಲಿ 90,280 ಕೋಟಿ ರೂ ಗಳನ್ನು ಸಾಲ ಪಡೆದಿದ್ದು, ರಾಜ್ಯದ ವಿತ್ತೀಯ ಕೊರತೆ 2.6% ಇದ್ದು, ರಾಜ್ಯ ಸರ್ಕಾರವು ಪಡೆದ ಒಟ್ಟು ಸಾಲ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡ ಮತ್ತು ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಸಾಲಮಿತಿಗೆ ಒಳಪಟ್ಟಿದೆ ಎಂದರು.
ರಾಜ್ಯ ಸರ್ಕಾರವು ರಾಜಸ್ವ ಹಾಗು ಬಂಡವಾಳ ಸ್ವೀಕೃತಿಗಳಿಂದ ಮತ್ತು ಕೇಂದ್ರ ಸರ್ಕಾರ ನಿಗದಿಪಡಿಸುವ ಮಿತಿಯೊಳಗೆ ಸಾಲವನ್ನು ಪಡೆಯುವ ಮೂಲಕ ಆಯವ್ಯಯದಲ್ಲಿ ಅಂದಾಜಿಸಿರುವ ವೆಚ್ಚವನ್ನು ಭರಿಸುತ್ತದೆ. ಈ ಸ್ವೀಕೃತಿಗಳನ್ನು ಮೀರಿ ಈವರೆಗೂ ಯಾವುದೇ ವೆಚ್ಚದ ಹೊರೆ ರಾಜ್ಯ ಸರ್ಕಾರಕ್ಕೆ ಉಂಟಾಗಿರುವುದಿಲ್ಲ ಎಂದು ಅವರು ನುಡಿದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿ ಕುಂಠಿತವಾಗಿದೆ ಎಂಬ ವಿರೋಧ ಪಕ್ಷಗಳ ಆರೋಪ ಸುಳ್ಳು ಹಾಗೂ ಸತ್ಯಕ್ಕೆ ದೂರವಾಗಿದ್ದು ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು