ಇತ್ತೀಚಿನ ಸುದ್ದಿ
ಹಾರ-ತುರಾಯಿ, ಶಾಲು-ಶಲ್ಯ ಏನೂ ಬೇಡ, ಪುಸ್ತಕ ಕೊಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ
22/05/2023, 11:09
ಬೆಂಗಳೂರು(reporterkarnataka.com): ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಾಧ್ಯಮ ಜತೆ ಮಾತನಾಡಿದ ಅವರು, ಇದು ನನ್ನ ನಿವಾಸ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯವಾಗುತ್ತದೆ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು.
ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ ಎಂದು ಅವರು ಹಾರೈಸಿದರು.