10:36 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹದಿಹರೆಯದ ಯುವತಿ ಮೇಲೆ ಅತ್ಯಾಚಾರ: ಆರೋಪಿ, ತಾಯಿ ವಿರುದ್ಧ ಪ್ರಕರಣ ದಾಖಲು

12/09/2022, 23:39

ನಾಗಪುರ(reporterkarnataka.com):  ಯುವತಿಯ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಯುವಕ ಹಾಗೂ ಆತನ ತಾಯಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂಬಂಧದ ಆಮಿಷವೊಡ್ಡಿ ಹದಿಹರೆಯದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಮಧ್ಯಪ್ರದೇಶದ 22 ವರ್ಷದ ಯುವಕನ ವಿರುದ್ಧ ಹಾಗೂ ಮತ್ತೋರ್ವ ಪುರುಷನ ಜತೆ ಲೈಂಗಿಕ ಸಂಬಂಧಕ್ಕೆ ಒತ್ತಾಯಿಸಿದ ಆರೋಪಿಯ ತಾಯಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈವೆಂಟ್ ಮ್ಯಾನೇಜ್‍ಮೆಂಟ್ ಕಂಪನಿಯ ಭಾಗವಾಗಿ ಯುವತಿ ಕಳೆದ ಮೇ ತಿಂಗಳಲ್ಲಿ ಭೋಪಾಲ್‍ಗೆ ಹೋಗಿದ್ದರು. ಆ ಸಂದರ್ಭದಲ್ಲಿ ಅಭಿಷೇಕ್ ಕುರಿಲ್ ಎಂಬಾತನ ಭೇಟಿಯಾಗಿತ್ತು. ಆತ ಯುವತಿಗೆ ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಮತ್ತೊಬ್ಬ ವ್ಯಕ್ತಿಯ ಜತೆ ದೈಹಿಕ ಸಂಬಂಧಕ್ಕಾಗಿ ಯುವತಿಯನ್ನು ಒತ್ತಾಯಿಸಿದ ಆರೋಪದಲ್ಲಿ ಆರೋಪಿಯ ತಾಯಿ ರಜನಿ (45) ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಯುವತಿಯ ಮೊಬೈಲ್ ಕಸಿದುಕೊಂಡು ಆಕೆಯ ಅಶ್ಲೀಲ ಚಿತ್ರಗಳನ್ನು ಆರೋಪಿ ಸಾಮಾಜಿ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.

ಅತ್ಯಾಚಾರ, ಅಪರಾಧ ಬೆದರಿಕೆ ಮತ್ತು ಇತರ ಕೃತ್ಯಗಳಿಗಾಗಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಬಂಧನಕ್ಕೆ ಪ್ರಯತ್ನ ಮುಂದುವರಿದಿದೆ ಎಂದು ಜರಿಪಾಟಕ್ ಪೊಲೀಸ್ ಠಾಣೆಯ ಅಧಿಕಾರಿಗಳು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು