12:00 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಹಲಾಲ್ v/s ಜಟ್ಕಾ ಕಟ್ ವಿವಾದ: ಪಶು ಸಂಗೋಪನಾ ಇಲಾಖೆಯಿಂದ ಸ್ಟನ್ನಿಂಗ್ ಕಡ್ಡಾಯ ಆದೇಶ

02/04/2022, 16:53

ಬೆಂಗಳೂರು(reporterkarnataka.com): ರಾಜ್ಯದಲ್ಲಿ  ಹಲಾಲ್ ಕಟ್ ಜಟ್ಕಾ ಕಟ್ ವಿವಾದ ಮಧ್ಯೆ ಪಶು ಸಂಗೋಪನಾ ಇಲಾಖೆ ಮಹತ್ವದ ಖಡಕ್ ಆದೇಶ ಹೊರಡಿಸಿದೆ. ಮೊದಲಿಗೆ ಪ್ರಾಣಿ ಹಿಂಸೆ ತಡೆಗಟ್ಟಿ ಎಂದು ಆದೇಶ ಹೊರಡಿಸಲಾಗಿದೆ.

ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು ಎಂದು ಸೂಚನೆ ನೀಡಲಾಗಿದೆ. ಹಿಂಸೆ ನೀಡದೆ ಪ್ರಾಣಿಗಳನ್ನು ವಧೆ ಮಾಡಬೇಕೆಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನು ಮುಂದೆ ಪ್ರಾಣಿ ವಧೆಗೆ ಸ್ಟನ್ನಿಂಗ್ (stunning) ಕಡ್ಡಾಯ ಎಂದು ಸರ್ಕಾರದ ಆದೇಶ ಹೇಳಿದೆ.

ಪ್ರಾಣಿ ವಧೆಗೂ ಮುನ್ನ ಸ್ಟನಿಂಗ್ ಮಾಡಲು ಸೂಚನೆ ನೀಡಲಾಗಿದ್ದು, ಸ್ಟನ್ನಿಂಗ್ ಸಿಸ್ಟಮ್ ಇರುವವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಪ್ರಾಣಿ ಹತ್ಯೆಗೂ ಮುನ್ನಾ ಪ್ರಾಣಿಗಳಿಗೆ ಪ್ರಜ್ಞೆ ತಪ್ಪಿಸಬೇಕಾಗುತ್ತದೆ. ಪ್ರಜ್ಞೆ ತಪ್ಪಿಸುವುದರಿಂದ ಪ್ರಾಣಿಗಳನ್ನು ಸಾಯಿಸುವಾಗ‌ ಅವುಗಳಿಗೆ ನೋವು ತಿಳಿಯುವುದಿಲ್ಲ. ಯಾವುದೇ ಅಂಗಡಿಗಳಲ್ಲಿ ಇದನ್ನು ಪಾಲನೆ ಮಾಡದ ಹಿನ್ನೆಲೆ, ಅನೇಕ ದೂರುಗಳು ಪಶು ಸಂಗೋಪನಾ ಇಲಾಖೆಗೆ ಬಂದಿದ್ದವು. ಹೀಗಾಗಿ ಈಗ ಆದೇಶ ಹೊರಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು