12:22 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಹಳೆ ಪ್ರಶ್ನೆ ಪತ್ರಿಕೆ ಪೂರೈಕೆ; ಬಿಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

06/09/2022, 13:39

ಮಂಗಳೂರು(Reporterkarnataka.com):ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯಲ್ಲಿ ಬಿಬಿಎ ದ್ವಿತೀಯ ಸೆಮಿಸ್ಟರ್‌ನ ಕನ್ನಡ ಪರೀಕ್ಷೆಗೆ ಹಳೆಯ ಪ್ರಶ್ನೆ ಪತ್ರಿಕೆ ನೀಡಿ ಎಡವಟ್ಟಿನಿಂದ ಪರೀಕ್ಷೆಯನ್ನೇ ಮುಂದೂಡಲಾಗಿದೆ. ಈ ಹಿನ್ನೆಲೆ ವಿವಿ ವ್ಯಾಪ್ತಿಯ 34ಕ್ಕೂ ಹೆಚ್ಚು ಕಾಲೇಜುಗಳಲ್ಲಿ ಪರೀಕ್ಷೆ ಮುಂದೂಡಲಾಗಿದೆ.

ಸೋಮವಾರ ಬಿಬಿಎ ವಿದ್ಯಾರ್ಥಿಗಳಿಗೆ ಮೊದಲ ದಿನ ಕನ್ನಡ ಪರೀಕ್ಷೆ ನಿಗದಿಯಾಗಿತ್ತು. ವಿದ್ಯಾರ್ಥಿಗಳಿಗೆ ನೀಡಿದ ಪ್ರಶ್ನೆಪತ್ರಿಕೆಯ ಮೇಲ್ಭಾಗದಲ್ಲಿ ‘ದ್ವಿತೀಯ ಸೆಮಿಸ್ಟರ್’ ಎಂದು ಬರೆಯಲಾಗಿತ್ತು.

ಆದರೆ ಅಲ್ಲಿ ಮುದ್ರಣವಾಗಿರುವ ಪ್ರಶ್ನೆಗಳು ಹಿಂದಿನ ಸೆಮಿಸ್ಟರ್‌ನದಾಗಿದ್ದವು. ಪರೀಕ್ಷೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಈ ಪ್ರಮಾದ ಗಮನಕ್ಕೆ ಬಂದಿದೆ. ತಕ್ಷಣ ಮಾಹಿತಿ ಪಡೆದ ಮಂಗಳೂರು ವಿವಿ ಪರೀಕ್ಷೆ ಮುಂದೂಡಿದೆ.

ವಿವಿ ಕುಲಸಚಿವ (ಪರೀಕ್ಷಾಂಗ) ಪ್ರೊ ಪಿ ಎಲ್ ಧರ್ಮ ಅವರು ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿದ್ದಾರೆ. ಹೊಸ ಪ್ರಶ್ನೆ ಪತ್ರಿಕೆಯೊಂದಿಗೆ ಶೀಘ್ರ ಪರೀಕ್ಷೆ ನಡೆಸುವುದಾಗಿ ತಿಳಿಸಲಾಗಿದೆ.

ಪ್ರಶ್ನೆಪತ್ರಿಕೆ ಎಡವಟ್ಟು ಸಂಬಂಧ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ಕಾಲೇಜುಗಳಿಗೆ ಪೂರೈಸುವ ಹೊಣೆ ಹೊತ್ತ ಸಂಬಂಧಪಟ್ಟ ಪರೀಕ್ಷಾ ವಿಭಾಗದ ಮುಖ್ಯಸ್ಥರಿಗೆ ಮಂಗಳೂರು ವಿಶ್ವವಿದ್ಯಾಲಯ ನೋಟಿಸ್ ಜಾರಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು