10:17 AM Sunday27 - July 2025
ಬ್ರೇಕಿಂಗ್ ನ್ಯೂಸ್
ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ…

ಇತ್ತೀಚಿನ ಸುದ್ದಿ

ಹಲ್ಲರೆ ಪ್ರಕರಣ ಖಂಡಿಸಿ ನಂಜನಗೂಡಿನಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

02/02/2024, 16:20

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಇತ್ತೀಚೆಗೆ ನಂಜನಗೂಡು ತಾಲೂಕು ಹಲ್ಲರೆ ಗ್ರಾಮದಲ್ಲಿ ನಡೆದ ಪ್ರಕರಣವನ್ನು ಖಂಡಿಸಿ ನಂಜನಗೂಡು ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.


ನಂಜನಗೂಡು ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟ ಮತ್ತು ದಲಿತ ಮುಖಂಡರುಗಳು ಭಾಗವಹಿಸಿ ಕೋಮು ಸಂಘರ್ಷವನ್ನು ಖಂಡಿಸುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರಕ್ಕೆ ಎರಡು ಕೋಮುಗಳ ನಡುವೆ ನಡೆದಿರುವ ಘರ್ಷಣೆಗೆ ಪೊಲೀಸ್ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೇ ನೇರ ಹೊಣೆ ಎಂದು ಪ್ರತಿಭಟನಾಕಾರರು ಆರೋಪಿಸಿದರು
ಗ್ರಾಮದ ದಲಿತರ ಮನೆಗಳಿಗೆ ಹೋಗಿ ಕಲ್ಲುತೂರಾಟ ನಡೆಸಿ, ದಾಂಧಲೆ ನಡೆಸಿರುವುದು ಅಕ್ಷಮ್ಯ ಅಪರಾಧ ಎಂದು ಖಂಡಿಸಿ ಬೃಹತ್ ಮಟ್ಟದಲ್ಲಿ ಜನಸ್ತೋಮ ಸೇರಿ ಪ್ರತಿಭಟಿಸಲಾಯಿತು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್ ಸರ್ಕಾರದ ಕಾನೂನು ಮತ್ತು ನಿಯಮಾವಳಿಗಳನ್ನು ಅರಿಯದೆ ಅವೈಜ್ಞಾನಿಕ ನಿರ್ಣಯ ಮಾಡಿದ್ದಾರೆ.
ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮತ್ತು ಕೋಮು ಸಂಘರ್ಷವನ್ನು ತಡೆಯುವಲ್ಲಿ ವಿಫಲರಾಗಿರುವ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನೀಲ್ ಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಜಿಲ್ಲಾ ಮತ್ತು ತಾಲ್ಲೂಕು ಆಡಳಿತದ ವೈಫಲ್ಯವೇ ಘಟನೆಗೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು
ಪರಿಶಿಷ್ಟ ಜಾತಿಯ ಬೀದಿಗೆ ನುಗ್ಗಿ ಅಮಾಯಕರ ಮೇಲೆ ದೌರ್ಜನ್ಯ ಮಾಡಿರುವ ಮತ್ತು ಅಂಬೇಡ್ಕರ್ ಅವರ ನಾಮಫಲಕ ಅಳವಡಿಸುವಾಗ ವಿರೋಧ ವ್ಯಕ್ತಪಡಿಸಿ ಘಟನೆಗೆ ಕಾರಣರಾಗಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು
ಹಾಗೂ ಆಸ್ತಿ ಪಾಸ್ತಿ ನಷ್ಠ ಉಂಟಾಗಿರುವ ಪರಿಶಿಷ್ಟ ಜಾತಿಯ ಜನರನ್ನು ಗುರುತಿಸಿ ತಕ್ಷಣವೇ ಪರಿಹಾರ ನೀಡಬೇಕು
ಮತ್ತು ಅಮಾಯಕರ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣವನ್ನು ವಜಾ ಮಾಡಬೇಕು ಎಂದು ಸಂಘಟಕರು ಒತ್ತಾಯಿಸಿ ದರು.
ಪ್ರತಿಭಟನಾ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಲೋಕನಾಥ್ ಉಪ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಭೇಟಿ ನೀಡಿ ಮನವಿ ಪತ್ರವನ್ನು ಸ್ವೀಕರಿಸಿ ಇನ್ನು ಮೂರು ದಿನಗಳ ಒಳಗಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು . ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು