2:21 PM Saturday21 - November 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8… ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು… ಮಂಡ್ಯ | ನಂದಿನಿ ಮೊಸರಿನ ಪ್ಯಾಕೆಟ್‌ನಲ್ಲಿ ಜಿಯೋ ಸಿಮ್ ಸಿಕ್ಕಿದೆ ಎಂದು ಸುಳ್ಳು… ತುಮಕೂರು | ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ವೇದಿಕೆ ಮೇಲೆಯೇ ಭಾವುಕರಾದ ಡಾ. ಪರಮೇಶ್ವರ್

ಇತ್ತೀಚಿನ ಸುದ್ದಿ

ಹಂಪನಕಟ್ಟೆ ಸುಲಭ್ ಶೌಚಾಲಯ ಬಳಿಯ ಫ್ರೀ ಪಾರ್ಕಿಂಗ್ ನಲ್ಲಿ ಶುಲ್ಕ ವಸೂಲಿ ಶುರು!: ವಿಶೇಷವೆಂದರೆ ಇಲ್ಲಿ ಸ್ವಚ್ಛತೆಯೇ ಇಲ್ಲ!!

02/09/2024, 21:06

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ನಗರದ ಹೃದಯ ಭಾಗದಲ್ಲಿರುವ ಹಂಪನಕಟ್ಟೆಯ ಸಾರ್ವಜನಿಕ ಶೌಚಾಲಯದ ಬಳಿ ಇರುವ ಕಾರು ಮತ್ತು ದ್ವಿಚಕ್ರ ವಾಹನ ಪಾರ್ಕಿಂಗ್ ಗೆ ಇದೀಗ ಶುಲ್ಕ ವಸೂಲಿ ಜಾರಿಯಾಗಿದೆ.


ಹಂಪನಕಟ್ಟೆಯ ಶೌಚಾಲಯದ ಬಳಿ ಇರುವ ಖಾಲಿ ಜಾಗದಲ್ಲಿ ಹಲವು ದಶಕಗಳಿಂದ ಕಾರು ಮತ್ತು ದ್ವಿಚಕ್ರ ವಾಹನಗಳನ್ನು ಪಾರ್ಕಿಂಗ್ ಮಾಡಲಾಗುತ್ತಿತ್ತು. ಇದು ಫ್ರೀ ಪಾರ್ಕಿಂಗ್ ಪ್ರದೇಶ. ಆದರೆ ಇದೀಗ ಪಾರ್ಕಿಂಗ್ ಗೆ ಪೈಸಾ ವಸೂಲಿ ಶುರುವಾಗಿದೆ. ದ್ವಿಚಕ್ರ ವಾಹನಗಳಿಗೆ 10 ರೂ. ಹಾಗೂ ಕಾರುಗಳಿಗೆ 30 ರೂ. ವಸೂಲಿ ಮಾಡಲಾಗುತ್ತಿದೆ. ಸುಮಾರು ಒಂದು ತಿಂಗಳಿನಿಂದ ಮಂಗಳೂರು ಮಹಾನಗರಪಾಲಿಕೆ ವತಿಯಿಂದ ಶುಲ್ಕ ಸಂಗ್ರಹ ಶುರುವಾಗಿದೆ. ವಿಚಿತ್ರವೆಂದರೆ ಇಲ್ಲಿ ಸ್ವಚ್ಛತೆಯ ಕೊರತೆಯಿದೆ. ಅಲ್ಲಲ್ಲಿ ತ್ಯಾಜ್ಯ ರಾಶಿ ಬಿದ್ದಿದೆ. ಪಕ್ಕದಲ್ಲೇ ಶೌಚಾಲಯವಿದೆ. ಸನಿಹದಲ್ಲೇ ಮಲ್ಟಿ ಸ್ಟೋರ್ಡ್ ಕಾರು ಪಾರ್ಕಿಂಗ್ ಕಾಮಗಾರಿ ಶುರುವಾಗಿ ಆರಂಭದಲ್ಲೇ ನಿಂತು ಹೋಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು