1:51 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಹಣ ದುರ್ಬಳಕೆ ಆರೋಪ: ಅಮೀನಗಡ ಪ್ರಭಾರ ಪಿಡಿಒ ಅಮಾನತು

05/12/2024, 18:19

ಶಿವು ರಾಠೋಡ ಕವಿತಾಳ ರಾಯಚೂರು

info.reporterkarnataka@gmail.com

ಹಣ ದುರ್ಬಳಕೆ ಆರೋಪದಡಿ ಅಮೀನಗಡ ಗ್ರಾಮ ಪಂಚಾಯಿತಿಯ ಪ್ರಭಾರ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಮಪ್ಪ ನಡಗೇರಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ಪಾಂಡ್ವೆ ಅಮಾನತು ಮಾಡಿದ್ದಾರೆ.
ಸಿಬ್ಬಂದಿ ವೇತನ ಮತ್ತು ರಸ್ತೆ ದುರಸ್ತಿಗೆ ಹಣ ಪಾವತಿ ಮಾಡುವುದಾಗಿ ಹೇಳಿ ತನ್ನ ಡಿಜಿಟಲ್‌ ಸಹಿ ಪಡೆದು ₹5 ಲಕ್ಷ ಡ್ರಾ ಮಾಡಿಕೊಂಡು ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ಅಧ್ಯಕ್ಷೆ ಬಸಲಿಂಗಮ್ಮ ದೂರು ನೀಡಿದ್ದರು.
ಈ ಹಿಂದೆ ಹಾಲಾಪುರ ಗ್ರಾಮ ಪಂಚಾಯಿತಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೇಳೆಯೂ ರಾಮಪ್ಪ ಅವರ ವಿರುದ್ಧ ಸಾರ್ವಜನಿಕರಿಂದ ದೂರು ಬಂದಿದ್ದವು. ಆ ದೂರುಗಳಿಗೂ ಸಮರ್ಪಕ ಉತ್ತರ ನೀಡದ ಕಾರಣ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಆದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು