1:49 PM Sunday7 - December 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ…

ಇತ್ತೀಚಿನ ಸುದ್ದಿ

ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆರಂಭ: ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಚಾಲನೆ

20/03/2025, 14:41

ಬೆಂಗಳೂರು(reporterkarnataka.com): ರಾಷ್ಟ್ರೀಯ ಜೀವನೋಪಾಯ ಮಿಷನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ಬೆಂಗಳೂರಿನ ಇನ್‍ಫೆಂಟ್ರಿ ರಸ್ತೆಯಲ್ಲಿರುವ ಐ.ಎ.ಎಸ್. ಆಫೀಸರ್ಸ್ ಕ್ಲಬ್‍ನಲ್ಲಿ ಆಯೋಜಿಸಲಾಗಿರುವ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉದ್ಘಾಟಿಸಿದರು.
ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವು ಮಾರ್ಚ್ 19ರಂದು ಆರಂಭಗೊಂಡಿದ್ದು, 21ರವರೆಗೆ ನಡೆಯಲಿದೆ. ರಾಜ್ಯದ ಸುಮಾರು 60 ಸ್ವಸಹಾಯ ಮಹಿಳಾ ಸಂಘಗಳು ಇದರಲ್ಲಿ ಭಾಗವಹಿಸಿವೆ.


ಈ ಮೇಳದಲ್ಲಿ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಉತ್ಕೃಷ್ಟ ಮಟ್ಟದ ಕರಕುಶಲ ವಸ್ತುಗಳು ಹಾಗೂ ಆಹಾರ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಾಗುತ್ತಿದೆ.
ಬಿದರಿ ಕಲೆ, ಕಿನ್ನಾಳ ಕಲೆ, ಮೈಸೂರು ಇನ್‍ಲೆ, ಚನ್ನಪಟ್ಟಣದ ಬೊಂಬೆಗಳು, ಕೈಯಿಂದ ತಯಾರಿಸಿದ ಆಭರಣಗಳು, ಜಿ.ಐ.ಟ್ಯಾಗ್ ಹೊಂದಿರುವ ಸೀರೆಗಳು, ಮೊಳಕಾಲ್ಮೂರು, ಇಳಕಲ್ ಸೀರೆಗಳು ಮಾರಾಟ ಮಾಡಲಾಗುತ್ತಿದೆ.
ವಸ್ತು ಪ್ರದರ್ಶನದಲ್ಲಿ ಜೇನುತುಪ್ಪ, ಶುದ್ಧ ಗಾಣದ ಶೇಂಗಾ ಎಣ್ಣೆ, ಉಪ್ಪಿನಕಾಯಿ, ಕರದಂಟು, ಚಿಕ್ಕಿಗಳು ಸಹ ಲಭ್ಯವಿದ್ದು, ತಿಂಡಿ ತಿನಿಸುಗಳನ್ನು ಸವಿಯಬಹುದಾಗಿದೆ.
ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು, ಸಾರ್ವಜನಿಕರು ಮೇಳದ ಸದುಪಯೋಗವನ್ನು ಪಡೆದುಕೊಳ್ಳಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು