3:12 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಹರೇಕಳದಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ: 210 ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ,1200 ಕೆಜಿ ಅಕ್ಕಿ ವಿತರಣೆ

30/09/2023, 17:58

ಮಂಗಳೂರು(reporterkarnataka.com): ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಳ್ಳಾಲ ತಾಲೂಕು ಪತ್ರಕರ್ತರ ಸಂಘ, ದ.ಕ. ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ , ಹರೇಕಳ ಗ್ರಾಮ ಪಂಚಾಯತ್ ಮತ್ತು ಜನಶಿಕ್ಷಣ ಟ್ರಸ್ಟ್ ನ ಸಂಯುಕ್ತ ಆಶ್ರಯದಲ್ಲಿ ಹರೇಕಳ‌ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಪ್ಲಾಸ್ಟಿಕ್ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ 210.52 ಕೆಜಿ ಪ್ಲಾಸ್ಟಿಕ್ ಸಂಗ್ರಹ ವಾಗಿದೆ. ಈ ಸಂದರ್ಭದಲ್ಲಿ ಪ್ಲಾಸ್ಟಿಕ್ ತಂದವರಿಗೆ 1200 ಕೆ.ಜಿ ಅಕ್ಕಿ ವಿತರಿಸಲಾಯಿತು.

ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನದ ಅಂಗವಾಗಿ ಸಾರ್ವಜನಿಕರು ತರುವ 100 ಗ್ರಾಂ ನಿಂದ 500 ಗ್ರಾಂ ವರೆಗಿನ ಪ್ಲಾಸ್ಟಿಕ್ ಗೆ 1 ಕೆಜಿ ಆಕ್ಕಿ ಹಾಗೂ 500 ಗ್ರಾಂ ಮೇಲ್ಪಟ್ಟು ಪ್ಲಾಸ್ಟಿಕ್ ತಂದ ಸಾರ್ವಜನಿಕರಿಗೆ 5 ಕೆಜಿ ಅಕ್ಕಿಯನ್ನು ಹಾಗೂ 1 ಕೆಜಿ ಮೇಲ್ಪಟ್ಟು ಪ್ಲಾಸ್ಟಿಕ್ ತಂದವರಿಗೆ 10 ಕೆಜಿ ಅಕ್ಕಿಯನ್ನು ವಿತರಿಸಲಾಗುವುದು ಎಂದು ತಿಳಿಸಲಾಗಿತ್ತು. ಈ ಹಿನ್ನಲೆಯಲ್ಲಿ ಹರೇಕಳ ಗ್ರಾಮ ಪಂಚಾಯತ್ ನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಉಳ್ಳಾಲ ತಾಲೂಕು ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೈಲಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸುವ ನಿಟ್ಟಿನಲ್ಲಿ ಮಾದರಿ ಕಾರ್ಯಕ್ರಮ. ಉಳ್ಳಾಲ ತಾಲೂಕಿನಾದ್ಯಂತ ಈ ರೀತಿಯ ಜಾಗೃತಿ ಕಾರ್ಯಕ್ರಮದ ಅಗತ್ಯವಿದೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿರುವ ಹಿನ್ನಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಕಡಿತಗೊಳಿಸಲು ಸಾಮೂಹಿಕ ಪ್ರಯತ್ನದ ಅಗತ್ಯವಿದೆ ಎಂದು ಹೇಳಿದರು.
ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ ತರುವವರಿಗೆ ಅಕ್ಕಿ ನೀಡುವ ಮೂಲಕ ಸಾಂಕೇತಿಕವಾದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹರೇಕಳದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಈ ಜಾಗೃತಿ ಸಮಗ್ರ ಪಂಚಾಯತ್ ನಲ್ಲಿ ನಿರಂತರವಾಗಿ ಮುಂದುವರಿಯಬೇಕು ಎಂದು ನುಡಿದರು.
ದ.ಕ. ಜಿಲ್ಲಾ ಸ್ವಚ್ಛತಾ ರಾಯಭಾರಿ ಮತ್ತು ಜನ ಶಿಕ್ಷಣ ಟ್ರಸ್ಟ್ ನಿರ್ದೇಶಕರಾದ ಶೀನ ಶೆಟ್ಟಿ ಯವರು ಮಾತನಾಡುತ್ತಾ, ಹರೇಕಳ ಗ್ರಾಮ ಪಂಚಾಯತ್ ನ್ನು ಕಸ ಮುಕ್ತ ಮಾದರಿ ಪಂಚಾಯತ್ ಆಗಿ ಮಾಡುವ ಸಂಕಲ್ಪ ಮಾಡಲಾಗಿದ್ದು ಈ ನಿಟ್ಟಿನಲ್ಲಿ ಸ್ವಯಂಪ್ರೇರಿತರಾಗಿ ಪಾಲ್ಗೊಳ್ಳಬೇಕಾಗಿದೆ ಎಂದರು.
ಮುಡಿಪು ಜನ ಶಿಕ್ಷಣ ಟ್ರಸ್ಟ್ ನಿರ್ದೇಶಕರಾದ
ಕೃಷ್ಣ ಮೂಲ್ಯ ಮುಖ್ಯ ಅತಿಥಿಗಳಾಗಿ ಭಾಗ ವಹಿಸಿದ್ದರು.
ಹರೇಕಳ ಗ್ರಾಮ ಪಂಚಾಯತ್ ಆಧ್ಯಕ್ಷೆ ಗುಲಾಬಿ, ಉಪಾಧ್ಯಕ್ಷ ಅಬ್ದುಲ್ ಮಜೀದ್ , ನಿಕಟ ಪೂರ್ವ ಅಧ್ಯಕ್ಷ ಬದ್ರುದ್ದೀನ್, ಮಾಜಿ ಅಧ್ಯಕ್ಷೆ ಅನಿತಾ,ಶಿವಾಸ್ ಕಾಲೇಜ್ ಪ್ರಾಂಶುಪಾಲರಾದ ಲವಿನಾ ಸೋನ್ಸ್ , ಉಳ್ಳಾಲ ತಾಲೂಕು ಪತ್ರಕರ್ತರ ಸಂಘದ ಆಧ್ಯಕ್ಷ ವಸಂತ ಕೊಣಾಜೆ, ಮುಡಿಪು ಜನ ಶಿಕ್ಷಣ ಟ್ರಸ್ಟ್ ನಿರ್ದೇಶಕರಾದ ಕೃಷ್ಣ ಮೂಲ್ಯ ಮುಖ್ಯ ಅತಿಥಿಗಳಾಗಿ ಭಾಗ ವಹಿಸಿದ್ದರು.
ಹರೇಕಳ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುತ್ತಪ್ಪ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಭಾಸ್ಕರ ರೈ ಕಟ್ಟ,ಅನ್ಸಾರ್ ಇನೋಳಿ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕಾರ್ಯಕಾರಿ ಸಮಿತಿ ಸದಸ್ಯರಾದ ರಾಜೇಶ್ ದಡ್ಡಂಗಡಿ, ಉಳ್ಳಾಲ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಧರ ಪೊಯ್ಯತ್ತಬೈಲ್, ಮೊದಲಾದವರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು