9:05 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ತುಳುನಾಡಿನ ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರದಾನ: ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯ ಗೌರವ

08/11/2021, 12:14

ಮಂಗಳೂರು(reporterkarnataka.com): ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ರಾಷ್ಟ್ರಪತಿ ರಾಮನಾಥ್ ಗೋವಿಂದ್ ಅವರು ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಇಂದು ಪ್ರದಾನ ಮಾಡಿದರು.

ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸಚಿವ ಸಂಪುಟದ ಹಿರಿಯ ಸಹೋದ್ಯೋಗಿಗಳು ಉಪಸ್ಥಿತರಿದ್ದರು.

ಹಾಜಬ್ಬ ಅವರು ಭಾನುವಾರ ದೆಹಲಿ ಪ್ರಯಾಣ ನಡೆಸಿದ್ದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಸ್ಪೈಸ್ ಜೆಟ್ ವಿಮಾನದಲ್ಲಿ ಮುಂಬಯಿ ಮೂಲಕ ಅವರು ದೇಶದ ರಾಜಧಾನಿ ತಲುಪಿದ್ದರು.

ಎಂದಿನಂತೆ ಮೊಣ ಕಾಲಿನಿಂದ ಮೇಲೆ ಬಿಳಿ ಪಂಚೆ ಹಾಗೂ ಬಿಳಿ ಶರ್ಟ್ ಧರಿಸಿ ಕೈಯಲ್ಲೊಂದು ಕಪ್ಪು ಬ್ಯಾಗ್ ಹಿಡಿದುಕೊಂಡು ಅವರು ವಿಮಾನ ಏರಿದರು. ಇದೀಗ ರಾಷ್ಟ್ರಪತಿಭವಕ್ಕೂ ಅದೇ ರೀತಿಯ ಮಾಸಿದ ಬಿಳಿ ಪಂಚೆ ಮತ್ತೆ ಬಿಳಿ ಶರ್ಟ್ ತೊಟ್ಟು ಕೈಲ್ಲಿ ಪ್ಲಾಸ್ಟಿಕ್ ಬ್ಯಾಗ್ ಹಿಡಿದುಕೊಂಡು ತೆರಳಿದ್ದರು.

ಕಿತ್ತಲೆ ಮಾರಿ ಜೀವನ ಸಾಗಿಸುತ್ತಿದ್ದ ಹರೇಕಳ ಹಾಜಬ್ಬ ಅವರು ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶದಲ್ಲೇ ದೊಡ್ಡ ಹೆಸರು. ತಾನು ಅಕ್ಷರ ಕಲಿಯದಿದ್ದರೂ ತನ್ನೂರಿನ ಮಕ್ಕಳು ಅಕ್ಷರದಿಂದ ವಂಚಿತರಾಗಬಾರದೆಂದು ಭಗೀರಥ ಪ್ರಯತ್ನಪಟ್ಟು ತನ್ನೂರಿಗೆ ಸರಕಾರಿ ಶಾಲೆಯನ್ನು ತರಿಸಿದ್ದರು. ಅವರ ಪ್ರಯತ್ನದ ಫಲವಾಗಿ ಪ್ರಾಥಮಿಕ ಶಾಲೆ ಪ್ರೌಢಶಾಲೆಯಾಗಿ ರೂಪುಗೊಂಡಿದೆ.

ಅಕ್ಷರ ಸಂತನಿಗೆ ರಿಪೋರ್ಟರ್ ಕರ್ನಾಟಕದ ಶುಭ ಹಾರೈಕೆ.

ಇತ್ತೀಚಿನ ಸುದ್ದಿ

ಜಾಹೀರಾತು