ಇತ್ತೀಚಿನ ಸುದ್ದಿ
ಹರ್ಷ ಕೊಲೆ ಆರೋಪಿಗೆ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ನಂಟು: ಗೃಹ ಸಚಿವ ಅರಗ ಜ್ಞಾನೇಂದ್ರ
16/09/2022, 20:46
ಬೆಂಗಳೂರು(reporterkarnataka.com) : ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಿಗೆ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಇತ್ತು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಫೋಟಕ ಮಾಹಿತಿ ನೀಡಿದ್ದಾರೆ.
ವಿಧಾನ ಪರಿಷತ್ ನಲ್ಲಿ ಮಾತನಾಡಿದ ಗೃಹ ಸಚಿವರು, ಹರ್ಷನ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಿಗೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ನಂಟು ಇದೆ ಎಂದರು.
ಕರೆ ವಿವರಗಳು ಮತ್ತು ಇತರ ಸಂವಹನಗಳು ಅವನು ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ತೋರಿಸುತ್ತದೆ ಎಂದು ಅವರು ಹೇಳಿದರು.