ಇತ್ತೀಚಿನ ಸುದ್ದಿ
ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸೋಲು: ಬಳ್ಳಾರಿಯಲ್ಲಿ ಶ್ರೀರಾಮುಲು ಪರಾಭವ: 2 ಕ್ಷೇತ್ರಗಳು ಕಾಂಗ್ರೆಸ್ ತೆಕ್ಕೆಗೆ
04/06/2024, 13:30

ಬೆಂಗಳೂರು(reporterkarnataka.com): ಅಶ್ಲೀಲ ವೀಡಿಯೊ ಪ್ರಕರಣದಲ್ಲಿ ಎಸ್ ಐಟಿಯಿಂದ ಬಂಧನಕ್ಕೊಳಗಾಗಿರುವ ಹಾಲಿ ಸಂಸದ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭೆ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ. ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಪರಾಭವ ಕಂಡಿದ್ದಾರೆ.
ಹಾಸನ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್ ಅವರು ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸಿದ್ದಾರೆ. ಬಳ್ಳಾರಿಯಲ್ಲಿ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಅಭ್ಯರ್ಥಿ ಇ. ತುಕರಾಮ್ ಅವರು ಪರಾಭವಗೊಳಿಸಿದ್ದಾರೆ. ಪೆನ್ ಡ್ರೈವ್ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಪ್ರಜ್ವಲ್ ರೇವಣ್ಣ ಚುನಾವಣಾ ಸೋಲಿನೊಂದಿಗೆ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.