3:32 PM Friday15 - August 2025
ಬ್ರೇಕಿಂಗ್ ನ್ಯೂಸ್
ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.…

ಇತ್ತೀಚಿನ ಸುದ್ದಿ

ಹಾಸನ ಲೋಕಸಭೆ ಕ್ಷೇತ್ರ: ಪ್ರಜ್ವಲ್ ರೇವಣ್ಣ ಮಣಿಸಲು ಕಡೂರಿನಲ್ಲಿ ಪೋಸ್ಟರ್ ವಾರ್ ಶುರು; ಕಾಂಗ್ರೆಸ್ ನಿಂದ ಕ್ವಿಜ್ ಅಭಿಯಾನ

08/04/2024, 19:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಹಾಸನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕಡೂರು ಕಾಂಗ್ರೆಸ್ ನಿಂದ ಅಭಿಯಾನ ಆರಂಭವಾಗಿದೆ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರಜ್ವಲ್ ವಿರುದ್ಧ ಪೋಸ್ಟರ್ ಅಭಿಯಾನ ಶುರು ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿಯೂ ಕಾಂಗ್ರೆಸ್ ಅಭಿಮಾನ ಆರಂಭಿಸಿದೆ. ಲೋಕಸಭಾ ಚುನಾವಣಾ ಕ್ವಿಜ್ 2024 ಎಂದು ವೈರಲ್ ಆಗುತ್ತಿದೆ.


*ಸಂಸದರಾದ ಬಳಿಕ ಕಡೂರಿಗೆ ನಿಮ್ಮ ಕೊಡುಗೆ ಏನು..?.
*ಚುನಾವಣೆ ಸಂದರ್ಭದಲ್ಲಿ ಮಾತ್ರ ಕಡೂರು ಪ್ರವಾಸ ಮಾತ್ರಾನಾ..?
*ಲೋಕಸಭಾ ಸದಸ್ಯರಾಗಿ ಕಡೂರಿಗೆ ಮಾಡಿರುವ ಅಭಿವೃದ್ಧಿ ಕೆಲಸಗಳು ಎಷ್ಟು..?
*ಆತ್ಮಸಾಕ್ಷಿ ಕೇಳಿಕೊಳ್ಳಿ ಸಂಸದರೇ?
ಹೀಗಂತ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕಾಂಗ್ರೆಸ್ ಪ್ರಶ್ನೆ ಹಾಕಿದೆ. ಪ್ರಜ್ವಲ್ ಮಣಿಸಲು ಕಡೂರಿನಲ್ಲಿ ಕಾಂಗ್ರೆಸ್ ಪೋಸ್ಟರ್ ವಾರ್ ನಡೆಯುತ್ತಿದೆ. ಜೆಡಿಎಸ್ ಹಾಗೂ ಬಿಜೆಪಿಗೆ ಮತ ನೀಡಬೇಡಿ ಎಂದು ಅಭಿಯಾನ ಕೂಡ ನಡೆಯುತ್ತಿದೆ. ಕಡೂರು ಶಾಸಕ ಕೆ.ಎಸ್. ಆನಂದ್ ಇರುವ ವಾಟ್ಸಪ್ ಗ್ರೂಪ್ ನಿಂದ ವೈರಲ್ ಆಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು