9:32 AM Wednesday9 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಹಾಸನದಲ್ಲಿ ಗೌಡ್ರ ಕುಟುಂಬ ಗೆಲ್ಲಿಸಲು ಬಿಜೆಪಿಗನಾದ ನಾನ್ಯಾಕೆ ಜೆಡಿಎಸ್ ಪರ ಕೆಲಸ ಮಾಡಬೇಕು: ಮಾಜಿ ಶಾಸಕ ಪ್ರೀತಂಗೌಡ ಪ್ರಶ್ನೆ

14/09/2023, 15:29

ಹಾಸನ(reporterkarnataka.com): ಹಾಸನದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದವರು ಅಭ್ಯರ್ಥಿಯಾಗುತ್ತಾರೆ. ನಿಷ್ಠಾವಂತ ಬಿಜೆಪಿ ಕಾರ್ಯಕರ್ತನಾಗಿ ಜೆಡಿಎಸ್ ಉಳಿಸಲು ನಾನ್ಯಾಕೆ ಕೆಲಸ ಮಾಡಬೇಕು ಎಂದು ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಪ್ರಶ್ನಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಪ್ರೀತಂಗೌಡ ತನ್ನ ಅಸಮಾಧಾನ ಹೊರ ಹಾಕಿದ್ದಾರೆ.
ನಾನು ಬಿಜೆಪಿಯ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ಜೆಡಿಎಸ್ ಪಕ್ಷ ಉಳಿಸೋದಕ್ಕೆ ನಾವ್ಯಾಕೆ ಸಹಕಾರ ಮಾಡಬೇಕು. ಯಾವುದೇ ಕಾರಣಕ್ಕೂ ನಮ್ಮಿಂದ ಅದು ಸಾಧ್ಯವಿಲ್ಲ ಎಂದು ಕಡ್ಡಿ ತುಂಡು ಮಾಡುವ ತರಹ ಮಾಧ್ಯಮದ ಮುಂದೆ ಪ್ರೀತಂಗೌಡ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ. ಸುರೇಶ್ ಸೋಲಿಸಲು ಯೋಗೇಶ್ವರ್ ಹೊಂದಾಣಿಕೆ ಬಗ್ಗೆಯೂ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ನಾವು ಕುಟುಂಬ ರಾಜಕಾರಣ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. 28 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ನಿಲ್ಲಲಿ, ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಬೇಕು ಅಂತ ಬಂದರೆ ಸ್ವಾಗತವಿದೆ. ಬಿಜೆಪಿ ಪಕ್ಷ ಉಳಿಸಿಕೊಳ್ಳಲು ನಮಗೆ ಗೊತ್ತಿದೆ. ನಾವು ಕುಟುಂಬ ರಾಜಕಾರಣ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು