12:52 AM Wednesday4 - December 2024
ಬ್ರೇಕಿಂಗ್ ನ್ಯೂಸ್
ದತ್ತ ಜಯಂತಿ ಹಿನ್ನೆಲೆ: ಡಿ.11ರಿಂದ 14 ವರೆಗೆ ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ ಪ್ರವೇಶಕ್ಕೆ… ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ 3 ದಶಕಗಳ ಮೆರುಗು: ಡಿ.10ರಿಂದ 15ರ ವರೆಗೆ ಆಳ್ವಾಸ್… ಕೇರಳದಲ್ಲಿ ಭೀಕರ ರಸ್ತೆ ಅಪಘಾತ: 5 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ದಾರುಣ ಸಾವು ಫೆಂಗಲ್ ಎಫೆಕ್ಟ್: ಬೆಂಗಳೂರಿನಲ್ಲಿ ಸಾಧಾರಣ ಮಳೆ; ಎಂದಿನಂತೆ ತೆರೆದುಕೊಂಡ ಶಾಲಾ- ಕಾಲೇಜು ಕೂಡ್ಲಿಗಿ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ; ಸಾಮಗ್ರಿ ಜಪ್ತಿ ಮಲೆನಾಡಲ್ಲಿ ಫೆಂಗಲ್ ಅಬ್ಬರ: ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ; ಕಾಫಿ ಬೆಳೆಗಾರರು ಕಂಗಾಲು ತುಮಕೂರು: ಭೀಕರ ರಸ್ತೆ ಅಪಘಾತ; 3 ಮಂದಿ ಮಹಿಳೆಯರ ದಾರುಣ ಸಾವು ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಮುಖ್ಯಮಂತ್ರಿ ಮೆಚ್ಚುಗೆ ಫೆಂಗಲ್ ಚಂಡಮಾರುತ: ದ.ಕ., ಉಡುಪಿ ಜಿಲ್ಲೆಯ ಶಾಲೆ ಹಾಗೂ ಪಿಯು ಕಾಲೇಜಿಗಳಿಗೆ ನಾಳೆ… ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ವೈಭವದ ಲಕ್ಷದೀಪೋತ್ಸವ ಸಂಪನ್ನ: ದಾಖಲೆ ಸಂಖ್ಯೆಯಲ್ಲಿ ನೆರೆದ…

ಇತ್ತೀಚಿನ ಸುದ್ದಿ

ಸುಪ್ರಸಿದ್ದ ಹಾಸನಾಂಬೆ ದೇವಿಯ ಉತ್ಸವಕ್ಕೆ ತೆರೆ: 10 ದಿನಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

03/11/2024, 19:58

ಅನುಷಾ ಪಾಟೀಲ್ ಹೊಳೆನರಸೀಪುರ ಹಾಸನ

info.reporterkarnataka@gmail.com

ಕಳೆದ 10 ದಿನಗಳಿಂದ ನಡೆಯುತ್ತಿರುವ ಹಾಸನದ ಸುಪ್ರಸಿದ್ದ ಹಾಸನಾಂಬೆ ದೇವಿಯ ಉತ್ಸವಕ್ಕೆ ಇಂದು ವಿಧ್ಯುಕ್ತವಾಗಿ ಮಂಗಳ ಹಾಡಲಾಯಿತು. ಹಾಸನಾಂಬೆಯ ದರ್ಶನಕ್ಕೆ ಇಂದು ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲನ್ನು ಬಂದ್ ಮಾಡುವ ಮೂಲಕ ತೆರೆ ಎಳೆಯಲಾಯಿತು.
ಹಾಸನಾಂಬೆ ಉತ್ಸವ ಕಳೆದ 10 ದಿನಗಳಿಂದ ನಡೆಯುತ್ತಿದೆ. ಹಾಸನಾಂಬೆಯ ದರ್ಶನಕ್ಕೆ ಇಡೀ ರಾಜ್ಯದ ವಿವಿಧ ಕಡೆಗಳಿಂದ ಭಕ್ತಾಧಿಗಳ ಪ್ರವಾಹ ಹಾಸನಕ್ಕೆ ಕಳೆದ 10 ದಿನಗಳಿಂದ ಪ್ರವಹಿಸುತ್ತಿತ್ತು. ಬೆಂಗಳೂರು ಹಾಗೂ ಹಾಸನದಿಂದ ಕೆಎಸ್ಸಾರ್ಟಿಸಿ ವಿಶೇಷ ಬಸ್ ವ್ಯವಸ್ಥೆ ಮಾಡಿತ್ತು. ಬೆಂಗಳೂರು ಟು ಹಾಸನ ಪಾಯಿಂಟ್ ಟು ಪಾಯಿಂಟ್ ಅಶ್ವಮೇಧ ಬಸ್ಸಿಗೆ ಸರತಿ ಸಾಲಿನಲ್ಲಿ ಪ್ರಯಾಣಿಕರನ್ನು ಕಳುಹಿಸುವ ವ್ಯವಸ್ಥೆಯನ್ನು ಪೊಲೀಸ್ ಇಲಾಖೆಯ ನೆರವಿನಿಂದ ಕೆಎಸ್ಸಾರ್ಟಿಸಿ ಮಾಡಿದೆ. ಬಸ್ ಏರಿದವರು ಯಾವುದೇ ಕಾರಣಕ್ಕೆ ಕೆಳಗೆ ಇಳಿಯುವಂತಿರಲಿಲ್ಲ. ಈ ಷರತ್ತನ್ನು ಪ್ರಯಾಣಿಕರಿಗೆ ಮುಂಚೆಯೇ ತಿಳಿಸಿ ಬಸ್ ಹತ್ತಿಸಲಾಗುತ್ತಿತ್ತು.
ವೀಕೆಂಡ್ ದಿನಗಳಾದ ಶನಿವಾರ ಮತ್ತು ಭಾನುವಾರ ದೇವಿಯ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಲಕ್ಷಾಂತರ ಭಕ್ತರು ಸರತಿ ಸಾಲಿನಲ್ಲಿ ನಿಂತು ಅಧಿ ದೇವತೆಯ ದರ್ಶನ ಪಡೆದು ಪುನೀತರಾದರು. ಒಂದು ಅಂದಾಜು ಪ್ರಕಾರ 20 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ. ಅಕ್ಟೋಬರ್ 24 ರಿಂದ ಆರಂಭಗೊಂಡಿದ್ದ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವ ಅದ್ದೂರಿ ಮತ್ತು ವಿಜೃಂಭಣೆಯಿಂದ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು