1:59 PM Sunday22 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ಹಸಿರು ಪಟಾಕಿಗೆ ಮಾತ್ರ ಅವಕಾಶ: ಅಧಿಕೃತ ಪರವಾನಿಗೆ ಹೊಂದಿದ ವ್ಯಾಪಾರಿಗಳಿಗೆ ಮಾರಾಟ ಅವಕಾಶ

31/10/2021, 09:33

ಬೆಂಗಳೂರು(reporterkarnataka.com): ನ್ಯಾಯಾಲಯವು ನೀಡಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು, ಉಳಿದ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವಂತೆ ಮತ್ತು ಬಳಸದಂತೆ ಸೂಚನೆ ನೀಡಲಾಗಿದೆ.

ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಹಸಿರು ಪಟಾಕಿಯನ್ನು ಮಾತ್ರ ಮಾರಾಟ ಮಾಡಬೇಕು. ಈ ಮಾರಾಟ ಮಳಿಗೆಗಳನ್ನು ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರದಿಂದ ನೀಡಿರುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ‘ಹಸಿರು ಪಟಾಕಿ’ ಅಂಗಡಿಗಳನ್ನು ಇಡಬೇಕು. ಬೇರೆ ಸ್ಥಳದಲ್ಲಿ ಮತ್ತು ದಿನಾಂಕಗಳಲ್ಲಿ ಅಂಗಡಿಯನ್ನು ತೆರೆಯಬಾರದು. ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸಲು ಸಂಬಂಧಿಸಿದ ಇಲಾಖೆ ಪ್ರಾಧಿಕಾರಗಳು ಅನುಮತಿಸಬೇಕು. ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 6 ಮೀಟಲ್ ಅಂತರವಿರಬೇಕು.

ಪ್ರತಿಯೊಂದು ಮಳಿಗೆಗಳಲ್ಲಿ ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರದಿಂದ ನೀಡಿರುವ ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ಪರವಾನಗಿ ಪತ್ರವನ್ನು ಪಡೆದವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು.

ಹಸಿರು ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ಯಾ ನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ಕನಿಷ್ಠ 6 ಅಡಿ ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಬೇಕು. ಪಟಾಕಿ ಮಾರುವ ವ್ಯಾಪಾರಸ್ಥರು ಮತ್ತು ಖರೀದಿಗೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪಟಾಕಿ ಖರೀದಿಯ ಸಂದರ್ಭದಲ್ಲಿ ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕು.

ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟು ನಿಟ್ಟಾಗಿ ಪಾಲಿಸಬೇಕು. ಅಲ್ಲದೇ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮಹಾನಗರ ಪಾಲಿಕೆ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಸ್ಥಳೀಯಾಡಳಿತ ಸಂಸ್ಥೆ /ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ / ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರದ ಆದೇಶ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರಗಿಸಲಾಗುವುದು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು