11:44 AM Wednesday19 - November 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ…

ಇತ್ತೀಚಿನ ಸುದ್ದಿ

ಹಾಸನ: ಅವಾಚ್ಯ ಪದಗಳಿಂದ ಪತಿಯ ಟಾರ್ಚರ್; ಮಗುವಿನೊಂದಿಗೆ ವೀಡಿಯೋ ಮಾಡಿಟ್ಟು ಪತ್ನಿ ಸೂಸೈಡ್

19/11/2025, 11:40

ಹಾಸನ(reporterkarnataka.com): ಪತಿ ಮತ್ತು ಅತ್ತೆ ನೀಡಿದ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ತನ್ನ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಬೆಟ್ಟಸೋಗೆ ಗ್ರಾಮದಲ್ಲಿ ನಡೆದಿದೆ. ಮದುವೆಯಾದಾಗಿನಿಂದಲೂ ಕಿರುಕುಳ ಕೊಡುತ್ತಿದ್ದ ಗಂಡನ ನಡತೆಯಿಂದ ಬೇಸತ್ತ ಮಹಿಳೆ ಡೆತ್ ನೋಟ್ ಬರೆದಿಟ್ಟು, ಮಗು ಜೊತೆ ವಿಡಿಯೋ ಮಾಡಿ ನದಿಗೆ ಹಾರಿದ್ದಾರೆ. ಪೊಲೀಸರ ನಿರ್ಲಕ್ಷ್ಯವೇ ಆಕೆಯ ಸಾವಿಗೆ ಕಾರಣವೆಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಸಾಲಿಗ್ರಾಮ ಮೂಲದ ಮಹಾದೇವಿ (29)ಸುಮಾರು ಮೂರು ವರ್ಷಗಳ ಹಿಂದೆ ಸೀಬಳ್ಳಿ ಗ್ರಾಮದ ಕುಮಾರ್ ಜೊತೆ ವಿವಾಹವಾಗಿದ್ದರು. ಮದುವೆಯ ನಂತರದಿಂದಲೇ ಪತಿ ಅನುಮಾನಪಟ್ಟು ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾನೆಂದು ಆರೋಪಿಸಲಾಗಿದೆ. ಪತಿಯ ಕಿರುಕುಳ ತಾಳಲಾರದೆ 15 ದಿನಗಳ ಹಿಂದೆ ತವರು ಮನೆ ಸೇರಿದ್ದ ಅವರಿಗೆ ಫೋನ್ ಮತ್ತು ಮೆಸೇಜ್ ಮೂಲಕ ಕುಮಾರ್ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡುತ್ತಲೇ ಇದ್ದ ಎಂದು ತಿಳಿದುಬಂದಿದೆ. ನವೆಂಬರ್ 14ರಂದು ಪತಿ ವಿರುದ್ಧ ದೂರು ನೀಡುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಮಹಾದೇವಿ, ಇದೀಗ ತನ್ನ ಪತಿ ಮತ್ತು ಅತ್ತೆಯೇ ತನ್ನ ಸಾವಿಗೆ ಕಾರಣವೆಂದು ಹೇಳಿ ಸೆಲ್ಫಿ ವೀಡಿಯೋ ಮಾಡಿ, ಡೆತ್‌ನೋಟ್ ಬರೆದು, ಮಗಳೊಂದಿಗೆ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾದೇವಿ ತಾನು ಮಾಡಿದ ವೀಡಿಯೋದಲ್ಲಿ ನನ್ನ ಪತಿ ಮತ್ತು ಅತ್ತೆಯೇ ನನ್ನ ಸಾವಿಗೆ ಕಾರಣ, ನನ್ನ ಕುಟುಂಬದವರಿಗೆ ಆತ ಜೀವ ಬೆದರಿಕೆ ಹಾಕಿದ್ದಾನೆ. ಹೀಗಿರುವಾಗ ನಾನು ಏಕೆ ಬದುಕಿರಬೇಕು ಎಂದು ತಮ್ಮ ನೋವು ಹೇಳಿಕೊಂಡಿದ್ದಾರೆ. ಬೆಟ್ಟಸೋಗೆ ಬಳಿಯ ನದಿಯಲ್ಲಿ ಮಹಾದೇವಿಯ ಮೃತದೇಹ ಪತ್ತೆಯಾಗಿದ್ದು, ಮಗುವಿನ ಹುಡುಕಾಟ ಮುಂದುವರಿದಿದೆ. ಪತಿ ಮತ್ತು ಅತ್ತೆಯ ಕಿರುಕುಳ ತಾಳಲಾರದೆ ದೂರು ನೀಡಲು ಬಂದ ಮಹಾದೇವಿಯನ್ನು ಪೊಲೀಸರು ಹೆದರಿಸಿ ವಾಪಾಸ್ ಕಳುಹಿಸಿದ್ದರು ಎಂದು ಮಹಾದೇವಿ ತಮ್ಮ ಹೇಳಿದ್ದು, ಪೊಲೀಸರ ನಿರ್ಲಕ್ಷ್ಯವೆ ಅಕ್ಕನ ಸಾವಿಗೆ ಕಾರಣವಾಗಿದೆ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣ ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು