10:13 AM Thursday26 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ ಕುಮಾರಸ್ವಾಮಿ ಆಗ್ರಹ

12/01/2025, 23:13

*ಈ ಘಟನೆ ಅತ್ಯಂತ ಹೇಯ, ವಿಕೃತಿ, ರಾಕ್ಷಸಿ ಕೃತ್ಯ ಎಂದ ಸಚಿವರು*

*ಕಾಮಧೇನುವಿನ ಕೆಚ್ಚಲು ಕೊಯ್ಯುವ ಹೇಯ ಕೃತ್ಯ ಮಾಡಿರುವ ಕೆಟ್ಟ ಮನಸ್ಥಿತಿಗೆ ಏನೆನ್ನಬೇಕು?*

ಬೆಂಗಳೂರು(reporterkarnataka.com): ನಗರದ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕುಯ್ದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಇದು ಅತ್ಯಂತ ಹೇಯ, ವಿಕೃತಿ ಎಂದಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾನು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕೂಡಲೇ ಆ ದುಷ್ಟರನ್ನು ಪತ್ತೆ ಹಚ್ಚಿ ಕಠಿಣವಾಗಿ ಶಿಕ್ಷಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು.
ಹಸುಗಳ ಕೆಚ್ಚಲು ಕೊಯ್ದ ಘಟನೆ ಬಗ್ಗೆ ಬೆಳಗ್ಗೆ ವಿದ್ಯುನ್ಮಾನ ಮಾಧ್ಯಮಗಳಲ್ಲಿ ದೃಶ್ಯ ಸಮೇತ ವರದಿಗಳು ಬಂದಾಗ ನನಗೆ ತೀವ್ರ ಆಘಾತ ಉಂಟಾಯಿತು. ಇದು ರಾಕ್ಷಸೀ ಕೃತ್ಯ. ಕಾಂಗ್ರೆಸ್ ಆಡಳಿತ ಇವತ್ತು ಎಲ್ಲಿಗೆ ಬಂದಿದೆ? ಎಂಬುದಕ್ಕೆ ಇದುವೇ ಸಾಕ್ಷಿ. ಇಲ್ಲಿಯವರೆಗೆ ಮನುಷ್ಯರನ್ನು ಕೊಲ್ಲುವುದನ್ನು ನೋಡಿದ್ದೇವೆ. ಹಸುವನ್ನು ನಾವು ಕಾಮಧೇನು, ಮಹಾಲಕ್ಷ್ಮೀ ಎಂದು ಪೂಜಿಸುತ್ತಿದ್ದೇವೆ. ಅಂಥ ಕಾಮಧೇನುವಿನ ಕೆಚ್ಚಲು ಕೊಯ್ಯುವ ಹೇಯ ಕೃತ್ಯ ಮಾಡಿರುವ ಕೆಟ್ಟ ಮನಸ್ಥಿತಿಗೆ ಏನನ್ನಬೇಕು? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಗೃಹ ಸಚಿವ ಪರಮೇಶ್ವರ್ ಅವರು ಈ ನಿಟ್ಟಿನಲ್ಲಿ ಕಠಿಣ ಕ್ರಮ ತಗೋಬೇಕು. ಅವರ ಬೆಣ್ಣೆ ಮಾತು ಇಲ್ಲಿ ನಡೆಯಲ್ಲ. ನಿಮ್ಮ ಡಿನ್ನರ್ ಮೀಟಿಂಗ್ ನಿಲ್ಸಿ, ಆಡಳಿತ ಸರಿ ಮಾಡೋದನ್ನು ನೋಡಿ. ಈ ಪ್ರಕರಣದ ಬಗೆ ಮುಲಾಜಿಲ್ಲದೆ ಕ್ರಮ ಜರುಗಿಸಿ. ಇವರ ಸರಕಾರದ ಅವಧಿಯಲ್ಲಿ ರಾಕ್ಷಸೀ ಕೃತ್ಯ ಮೆರೆಯುವ ಇಂಥ ಜನರನ್ನು ಹೆಚ್ಚೆಚ್ಚು ಸೃಷ್ಟಿ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಇತ್ತೀಚಿನ ಸುದ್ದಿ

ಜಾಹೀರಾತು