ಇತ್ತೀಚಿನ ಸುದ್ದಿ
ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ
12/01/2025, 23:11
ವಿಜಯನಗರ(reporterkarnataka.com): ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ಹಿಂಸೆ ನೀಡಿದ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು
ಹಗರಿಬೊಮ್ಮನಹಳ್ಳಿಯಲ್ಲಿಮಾಧ್ಯಮದ ಜತೆ ಮಾತನಾಡಿದ ಅವರು ತಿಳಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಪ್ರತಿಭಟನೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ತಪ್ಪಿತಸ್ಥರ ಮಾಹಿತಿ ದೊರೆತಿಲ್ಲ. ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ. ಹಿಂದೂ ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಿದರು.