12:53 PM Tuesday11 - August 2026
ಬ್ರೇಕಿಂಗ್ ನ್ಯೂಸ್
ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ…

ಇತ್ತೀಚಿನ ಸುದ್ದಿ

ಹಸುವಿಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಹರಿದ ಗ್ಯಾಸ್ ಲಾರಿ: ಛಿದ್ರ ಛಿದ್ರಗೊಂಡ ಸವಾರನ ಮೃತದೇಹ

05/11/2023, 21:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಸ್ತೆ ಮಧ್ಯೆ ಕೂತಿದ್ದ ಹಸುವಿಗೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಉರುಳಿದ ಬೈಕ್ ಸವಾರರ ಮೇಲೆ ಗ್ಯಾಸ್ ಲಾರಿ ಹರಿದ ಪರಿಣಾಮ ದೇಹ ಛಿದ್ರಛಿದ್ರಗೊಂಡು ಸವಾರ ಮೃತಪಟ್ಟ ದಾರುಣ ಘಟನೆ ಮೂಡಿಗೆರೆ ತಾಲ್ಲೂಕಿನ ಬಿದರಹಳ್ಳಿ ಬಸ್ ಡಿಪೋ ಬಳಿ ನಡೆದಿದೆ.
ಲಾರಿ ಚಕ್ರದಡಿಗೆ ಸಿಲುಕಿ ಸಾವನ್ನಪ್ಪಿದ ಬೈಕ್ ಸವಾರರನ್ನು
ವಿಶ್ವೇಂದ್ರ (43) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಈ ಘೋರ ದುರಂತ ನಡೆದಿದೆ. ಬೈಕಿನ ಹಿಂದೆ ಕೂತಿದ್ದ ಲಕ್ಷ್ಮಿ ಎಂಬ ಮಹಿಳೆಯ ಕಾಲು ಕಟ್ ಆಗಿದೆ. ಲಕ್ಷ್ಮೀ ಅವರನ್ನು
ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕಿನಲ್ಲಿದ್ದವರು ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಲ್ಕೆರೆ ಗ್ರಾಮದವರು ಎನ್ನಲಾಗಿದೆ.ಸಾಗಿಸಲಾಗದಷ್ಟು ವಿಶ್ವೇಂದ್ರ ಮೃತದೇಹ ಛಿದ್ರಗೊಂಡಿತ್ತು.
ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು