ಇತ್ತೀಚಿನ ಸುದ್ದಿ
ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ
13/01/2025, 23:46
ಬೆಂಗಳೂರು(reporterkarnataka.com): ಚಾಮರಾಜನಗರದಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಆರೋಪಿಯನ್ನು ಪೊಲೀಸರು ರಾತೋರಾತ್ರಿ ಬಂಧಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬಂಧಿತ ಆರೋಪಿಯನ್ನು ಬಿಹಾರ ಮೂಲದ ಸೈಯದ್ ನಸ್ರು ಎಂದು ಗುರುತಿಸಲಾಗಿದೆ. ಕಾಟನ್ಪೇಟೆ ಪೊಲೀಸರು ರಾತ್ರೋ ರಾತ್ರಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಸೆರೆ ಹಿಡಿದಿದ್ದಾರೆ.
ಸ್ಥಳೀಯರು ನೀಡಿದ ಮಾಹಿತಿ ಹಾಗೂ ಟೆಕ್ನಿಕಲ್ ಎವಿಡೆನ್ಸ್ ನ ಆಧಾರದ ಮೇಲೆ ಕಾಟನ್ ಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಬಂಧಿತ ಆರೋಪಿಯನ್ನು ರಾತ್ರಿಯೇ ನ್ಯಾಯಾಧೀಶರೆದುರು ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸೈಯದ್ ನಸ್ರು ಬೆಂಗಳೂರಿನ ಹಳೆ ಪೆನ್ಷನ್ ಮೊಹಲ್ಲದಲ್ಲಿ ನೆಲೆಸಿದ್ದಾನೆ. ಅಲ್ಲಿಂದ ಕೇವಲ 50 ಮೀಟರ್ ದೂರದಲ್ಲಿರುವ ಜಾಗದಲ್ಲಿ ಈ ಕೃತ್ಯ ಎಸಗಿದ್ದಾನೆ. ಪ್ಲಾಸ್ಟಿಕ್ ಹಾಗೂ ಬಟ್ಟೆ ಬ್ಯಾಗ್ ಹೊಲಿಯುವ ಸಣ್ಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲೇ ಮಲಗುತ್ತಿದ್ದ ಎಂದು ತಿಳಿದು ಬಂದಿದೆ.