8:58 PM Wednesday10 - September 2025
ಬ್ರೇಕಿಂಗ್ ನ್ಯೂಸ್
ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ

ಇತ್ತೀಚಿನ ಸುದ್ದಿ

ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸಕ್ಕೆ ಸುತ್ತೂರು ಶ್ರೀಗಳು ಚಾಲನೆ; ಮಹಾ ದಾಸೋಹಕ್ಕೆ ಕ್ಷಣಗಣನೆ

25/01/2025, 15:56

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಜನವರಿ 26ರಿಂದ 31ರವರೆಗೆ ನಡೆಯಲಿರುವ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವದ ಮಹಾ ದಾಸೋಹಕ್ಕೆ ಸುತ್ತೂರು ಶ್ರೀಗಳು ಚಾಲನೆ ನೀಡಿದರು.
ಬೃಹತ್ ಅಡುಗೆ ಮನೆಯಲ್ಲಿ ಅಡುಗೆ ಒಲೆಗಳಿಗೆ ಪೂಜೆ ಸಲ್ಲಿಸಿ ದೊಡ್ಡ ದೊಡ್ಡ ಪಾತ್ರೆಗಳಿಗೆ ಅಡುಗೆ ಪದಾರ್ಥ ಹಾಕುವ ಮೂಲಕ ಚಾಲನೆ ನೀಡಲಾಯಿತು.
ಇಂದು ದೊಡ್ಡ ದೊಡ್ಡ ಅಡುಗೆ ಒಲೆಗಳಿಗೆ ಹಚ್ಚುವ ಬೆಂಕಿ ಒಂದು ವಾರಗಳ ಕಾಲ ಆರದೇ ಇರುವುದು ತ್ರಿಕಾಲ ಮಹಾ ದಾಸೋಹದ ವಿಶೇಷ.


ಸುತ್ತೂರು ಜಾತ್ರೆ ಮಹಾ ದಾಸೋಹಕ್ಕೆ 1 ಸಾವಿರ ಕ್ವಿಂಟಾಲ್ ಅಕ್ಕಿ, 250 ಕ್ವಿಂಟಾಲ್ ಬೇಳೆ, 200 ಕ್ವಿಂಟಾಲ್ ಸಕ್ಕರೆ, 1500 ಸಾವಿರ ಟಿನ್ ಅಡುಗೆ ಎಣ್ಣೆ 10 ಸಾವಿರ ಕೆಜಿ ತುಪ್ಪ, ಸಾವಿರಾರು ಕ್ವಿಂಟಲ್ ತರಕಾರಿ ಸೇರಿದಂತೆ ಅಡುಗೆ ಸಾಮಾಗ್ರಿ ದಾಸ್ತಾನು ಮಾಡಿಕೊಳ್ಳಲಾಗಿದೆ.
ಇದರಿಂದಾಗಿ ಪ್ರತಿನಿತ್ಯ ಬಗೆ ಬಗೆಯ ಸಿಹಿಯು ಸೇರಿದಂತೆ ಲಕ್ಷಾಂತರ ಮಂದಿಗೆ ತ್ರಿಕಾಲ ದಾಸೋಹ ವ್ಯವಸ್ಥೆಗೆ ಚಾಲನೆ ನೀಡಲಾಯಿತು.
ಸುತ್ತೂರು ಜಗದ್ಗುರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಗಳು, ಮಠದ ಕಾರ್ಯದರ್ಶಿಗಳಾದ ಮಂಜುನಾಥ ಸ್ವಾಮಿ, ಉದಯಕುಮಾರ್, ಶಿವಕುಮಾರ್, ಮಹಾ ದಾಸೋಹ ವ್ಯವಸ್ಥಾಪಕರಾದ ಸುಬ್ಬಪ್ಪ, ಸೇರಿದಂತೆ ಹಲವು ಮಠಾಧೀಶರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು