ಇತ್ತೀಚಿನ ಸುದ್ದಿ
ಹತ್ಯೆಗೀಡಾದ ಪ್ರವೀಣ್ ಮನೆಗೆ ಭೇಟಿ: ಕಾಂಗ್ರೆಸ್ ನಾಯಕರಿಗೆ ಧಿಕ್ಕಾರ ಕೂಗಿದ ಸ್ಥಳೀಯರು
31/07/2022, 19:19

ಪುತ್ತೂರು(reporterkarnataka.com): ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಟುಂಬಸ್ಥರನ್ನು ಭೇಟಿಯಾಗಲು ಬಂದ ಕಾಂಗ್ರೆಸ್ ನಾಯಕರಿಗೆ ಸ್ಥಳೀಯರು ಧಿಕ್ಕಾರ ಕೂಗಿದ ಘಟನೆ ನಡೆದಿದೆ.
ಪ್ರವೀಣ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡರಿಗೆ ಸ್ಥಳೀಯರು ಧಿಕ್ಕಾರ ಕೂಗಿ ತರಾಟೆಗೆ ತೆಗೆದುಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಕಾಂಗ್ರೆಸ್ ಮುಖಂಡರಾದ ಬಿ.ಕೆ. ಹರಿಪ್ರಸಾದ್, ಮಾಜಿ ಸಚಿವ ರಮಾನಾಥ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಾಜಿ ಮೇಯರ್ ಕವಿತಾ ಸನಿಲ್ ಸೇರಿ ಹಲವು ಮುಖಂಡರು ಭೇಟಿ ನೀಡಿದ್ದರು.
ಈ ವೇಳೆ ಕಾಂಗ್ರೆಸ್ ನಾಯಕರು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಪ್ರವೀಣ್ ಸಂಬಂಧಿಕರು ಮೊನ್ನೆ ಬಾರದವರು ಇಂದೇಕೆ ಬಂದಿದ್ದು? ಆರೋಪಿಗಳಿಗೆ ಜಾಮೀನು ನೀಡುವವರು ಕೂಡಾ ರಾಜಕೀಯದವರೇ ಎಂದು ಪ್ರಶ್ನಿಸಿದರು.
ಇದೇ ವೇಳೆ ತಮ್ಮ ಮನೆಯಿಂದ ಹೊರಗೆ ಹೋಗುವಂತೆ ಕುಟುಂಬಸ್ಥರು ಮನವಿ ಮಾಡಿದರು.