ಇತ್ತೀಚಿನ ಸುದ್ದಿ
ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ: ಕುಟುಂಬ ಸದಸ್ಯರಿಗೆ ಸಾಂತ್ವಾನ
28/07/2022, 19:55
ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಸಂಜೆ ಬೆಳ್ಳಾರೆಯ ನೆಟ್ಟಾರಿನಲ್ಲಿರುವ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಈ ಸಂದರ್ಭದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ, ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಸಂಸದ ನಳೀನ್ ಕುಮಾರ್ ಕಟೀಲ್, ನಾಯಕರಾದ
ಸಿ.ಟಿ ರವಿ, ಶಾಸಕ ಸಂಜೀವ್ ಮಠಂದೂರು, ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜನ ಪ್ರತಿನಿಧಿಗಳು ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.